ಬೆಂಗಳೂರು: ಹಿಜಾಬ್ ಕುರಿತ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ಜಮೀರ್ ಅಹ್ಮದ್
ಹೆಣ್ಣು ಮಕ್ಕಳು ಹಿಜಾಬ್ ಧರಿಸದೇ ಹೋದರೆ ರೇಪ್ ಆಗುತ್ತವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ, ಸ್ವಪಕ್ಷದಲ್ಲಿಯೇ ಟೀಕೆಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಟ್ವೀಟರ್ ಮೂಲಕ ಕ್ಷಮೆ ಯಾಚಿಸಿದ್ದಾರೆ.
Published: 15th February 2022 01:20 AM | Last Updated: 15th February 2022 01:17 PM | A+A A-

ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಹೆಣ್ಣು ಮಕ್ಕಳು ಹಿಜಾಬ್ ಧರಿಸದೇ ಹೋದರೆ ರೇಪ್ ಆಗುತ್ತವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ, ಸ್ವಪಕ್ಷದಲ್ಲಿಯೇ ಟೀಕೆಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಟ್ವೀಟರ್ ಮೂಲಕ ಕ್ಷಮೆ ಯಾಚಿಸಿದ್ದಾರೆ.
ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯಿಂದ ಹಾಗೆ ಹೇಳಿದೆಯ ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾಧವಿದೆ ಎಂದಿದ್ದಾರೆ.
ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾಧವಿದೆ. 2/7#HijabIsOurPride
— B Z Zameer Ahmed Khan (@BZZameerAhmedK) February 14, 2022
ಸರಣಿ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈ ಮೇಲಿನ ಬಟ್ಟೆ ಖಂಡಿತಾ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ ಕಾರಣ. ಹೆಣ್ಣು ಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು ಎಂದು ಅವರು ಹೇಳಿದ್ದಾರೆ.
ಹೌದು, ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ, ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ.
— B Z Zameer Ahmed Khan (@BZZameerAhmedK) February 14, 2022
ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು. 5/7#HijabIsOurPride
ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್- ಬುರ್ಖಾದ ಕಾರಣ ನೀಡಿ ದಯವಿಟ್ಟು, ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ಸರ್ಕಾರ ಮತ್ತು ಸಮಾಜವನ್ನು ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಉಲ್ಟಾ ಹೊಡೆದ ಜಮೀರ್ ಅಹ್ಮದ್ ಖಾನ್, 'ಹಿಜಾಬ್ ಹೆಣ್ಣುಮಕ್ಕಳಿಗೆ ಸೇಫ್ಟಿ ಎಂಬರ್ಥದಲ್ಲಿ ಹೇಳಿದ್ದೆ' ಎಂದ ಕಾಂಗ್ರೆಸ್ ಶಾಸಕ
ಜಮೀರ್ ಅಹಮದ್ ಅವರ ಹಿಜಾಬ್ ಕುರಿತ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೀವಾಲ ಟ್ವೀಟ್ ಮೂಲಕ ಖಂಡಿಸಿದ್ದರು. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ, ನಾಯಕರು ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಹೇಳಿದ್ದರು.