ಪ್ರವಾಸದಿಂದ ಮಸಣಕ್ಕೆ: ಬೆಂಗಳೂರಿನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿ, 4 ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಹಾರಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Published: 16th February 2022 09:49 AM | Last Updated: 16th February 2022 01:39 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಹಾರಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ, ಆ ಬಳಿಕ ಲಾರಿಗೆ ಡಿಕ್ಕಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದ್ದು, ಡಿವೈಡರ್ ಹಾರಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತಪಟ್ಟಂತ ವಿದ್ಯಾರ್ಥಿಗಳೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೃತರನ್ನು ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವಂತ ಸಿರಿಕೃಷ್ಣ ಮತ್ತು ಅಂಕಿತಾ ರೆಡ್ಡಿ ಸ್ಥಿತಿ ಗಂಭೀರವಾಗಿದೆ.
ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಮೃತ ವಿದ್ಯಾರ್ಥಿಗಳು ಜಾಲಿ ರೈಡ್ ಗೆ ತೆರಳಿ, ವಾಪಾಸ್ ಆಗುತ್ತಿದ್ದರೆಂದು ತಿಳಿದು ಬಂದಿದೆ. ಈ ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಹೊಸಕೋಟೆ ಠಾಣೆ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.