ರಾಜ್ಯದ 8 ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದ್ದಾರೆ.
Published: 16th February 2022 09:06 AM | Last Updated: 16th February 2022 12:00 PM | A+A A-

ಮುರುಗೇಶ್ ನಿರಾಣಿ
ಬೆಂಗಳೂರು: ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ರಮೇಶ್ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,2022 - 23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಇದರಲ್ಲಿ ಪ್ರಮುಖವಾಗಿ 2022-23 ರಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಹಾಸನ, ಯಾದಗಿರಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಕೆಐಎಡಿಬಿ ಯೋಜಿಸುತ್ತಿದೆ. ಹಳೆಯ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಕ್ರಿಟಿಕಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಸ್ಕೀಮ್ ಅಡಿಯಲ್ಲಿ 525 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಇದನ್ನೂ ಓದಿ: ಕೈಗಾರಿಕೆಗಳಿಂದ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ
ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021 ರ ಹಣಕಾಸು ವರ್ಷದ ಏಪ್ರಿಲ್ - ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.