ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ
ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
Published: 17th February 2022 10:29 PM | Last Updated: 17th February 2022 10:30 PM | A+A A-

ತೈವಾನ್ ರಾಷ್ಟ್ರದ ನಿಯೋಗದೊಂದಿಗೆ ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಸಚಿವ ನಿರಾಣಿ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿತು.
ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮತ್ಯೆಗಳಿದ್ದು, ವಿಸ್ಟ್ರಾನ್ ಕಾರ್ಪೋರೇಷನ್, ಮೀಡಿಯಾಟೆಕ್, ಡಿ- ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ವಿವರಿಸಿದರು. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿಗಳಿಂದ ರಾಜ್ಯದಲ್ಲಿ ಉದ್ಯಮಿ ಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ದಿಸಿವೆ ಎಂದು ಹೇಳಿದರು.
Pleasure to have met the Taiwanese business delegation headed by Mr. Baushuan Ger, Head Representative, Taipei Economic and Cultural Centre to India in Bengaluru. Briefed the visiting delegation about Karnataka’s business ecosystem and investment opportunities in various sectors. pic.twitter.com/JVw0M3h1tJ
— Dr. Murugesh R Nirani (@NiraniMurugesh) February 17, 2022
ಬೆಂಗಳೂರಿನಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್ ಮೆಂಟ್ ಕಾರ್ಪೋರೇಷನ್ , ಮಾಸ್ಟರ್ ಪ್ಲಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅಲ್ಲಿ ತೈವಾನ್ ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋರ್ಟಾಸ್ ಪ್ರೈವೇಟ್ ಲಿಮಿಟೆಡ್ ಈಗಾಗಲೇ ಪಾರ್ಕ್ ನಲ್ಲಿ ಕಾರ್ಖಾನೆ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.