ರಾಜ್ಯದಲ್ಲೂ 3 ಕೃಷಿ ಕಾಯ್ದೆ ವಾಪಸ್ ಪಡೆಯಿರಿ: ಸರ್ಕಾರಕ್ಕೆ ರೈತರ ಆಗ್ರಹ
ಐದು ದಿನಗಳ ಹಿಂದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆಗೆ ಹಾಜರಾಗಿದ್ದು, ಸಭೆ ವೇಳೆ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳಿದ್ದ ಪಟ್ಟಿಯನ್ನು ಸಲ್ಲಿಸಿದ್ದಾರೆ.
Published: 19th February 2022 11:01 AM | Last Updated: 19th February 2022 11:31 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಐದು ದಿನಗಳ ಹಿಂದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಸಭೆಗೆ ಹಾಜರಾಗಿದ್ದು, ಸಭೆ ವೇಳೆ ಮುಖ್ಯಮಂತ್ರಿಗಳಿಗೆ ಹಲವು ಬೇಡಿಕೆಗಳಿದ್ದ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಬೇಡಿಕೆಗಳಿರುವ ಪಟ್ಟಿಯಲ್ಲಿ ಪ್ರಮುಖವಾಗಿ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಂತೆಯೇ ರಾಜ್ಯ ಸರ್ಕಾರ ಕೂಡ ವಾಪಸ್ ಪಡೆದುಕೊಳ್ಳುವಂತೆ ಆಗ್ರಹಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿಯವರು, ಮೂರು ಕೃಷಿ ಕಾಯ್ದೆ ವಾಪಸ್ ಪಡೆವ ಬಗ್ಗೆ ಪ್ರತಿಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುವುದು. ರಾಗಿ ಖರೀದಿ ಕೇಂದ್ರಗಳನ್ನು ಪುನರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಕೇಂದ್ರ ಸಬ್ಸಿಡಿ ನೀಡಿದ ನಂತರ ಡ್ರೋನ್ ಖರೀದಿಸಲು ರಾಜ್ಯದ ರೈತರು ಉತ್ಸುಕ
ಬಳಿಕ ಮಾತನಾಡಿದ ರೈತ ನಾಯಕ ಕೋಡಿ ಹಳ್ಳಿ ಚಂದ್ರಶೇಖರ್ ಅವರು, ವಿಧೇಯಕ ಮಂಡಿಸುವಾಗ ಪ್ರತಿಪಕ್ಷಗಳು ಮತ್ತು ಅವರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿರುವಾಗ, ಸರ್ಕಾರ ಈಗ ಪ್ರತಿಪಕ್ಷಗಳೊಂದಿಗೆ ಏಕೆ ಮಾತನಾಡುತ್ತಿದೆ? ಕಾನೂನು ವಾಪಸ್ ಪಡೆಯಲೇಕೆ ಹಲವು ತಿಂಗಳುಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಬೆಳಗಾವಿ ಅಧಿವೇಶನದ ವೇಳೆ ಸರ್ಕಾರದ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾಗ ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುತ್ತದೆ ಎಂದು ಹೇಳಲಾಗಿತ್ತು ಎಂದು ತಿಳಿಸಿದ್ದಾರೆ.