ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಬಿಗುವಿನ ಪರಿಸ್ಥಿತಿ
ಸೀಗೆಹಟ್ಟಿಯ ದೊಡ್ಡಪೇಟೆ ಪೊಲೀಸ್ ಠಾಣೆ ಬಳಿ 22 ವರ್ಷದ ಹಿಂದೂ ಕಾರ್ಯಕರ್ತ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Published: 20th February 2022 11:03 PM | Last Updated: 20th February 2022 11:43 PM | A+A A-

ಸಂಗ್ರಹ ಚಿತ್ರ
ಶಿವಮೊಗ್ಗ: ಇಲ್ಲಿನ ಸೀಗೆಹಟ್ಟಿಯಲ್ಲಿ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸೀಗೆಹಟ್ಟಿಯ ದೊಡ್ಡಪೇಟೆ ಪೊಲೀಸ್ ಠಾಣೆ ಬಳಿ 24 ವರ್ಷದ ಹಿಂದೂ ಕಾರ್ಯಕರ್ತ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹರ್ಷನ ಮೃತದೇಹ ಇಡಲಾಗಿದ್ದು ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.