ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ: ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ ಜಾರಿ
ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಜಿಲ್ಲೆಯಲ್ಲಿ 2 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ.
Published: 21st February 2022 08:41 PM | Last Updated: 21st February 2022 08:41 PM | A+A A-

ಹಿಂಸಾಚಾರ ದೃಶ್ಯ
ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಜಿಲ್ಲೆಯಲ್ಲಿ 2 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ.
ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಇಂದು ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಿನ್ನೆ ರಾತ್ರಿ ಹರ್ಷ ನನ್ನು ಕಾರಿನಲ್ಲಿ ಬಂದಿದ್ದ 6 ಜನರು ಬರ್ಬರ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ವ್ಯಾಪಕ ಹಿಂಸಾಚಾರ ಉಲ್ಬಣಗೊಂಡಿತ್ತು. ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಶಿವಮೊಗ್ಗ ನಗರದಲ್ಲಿ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯಲ್ಲಿ ಹಣ್ಣಿನ ಅಂಗಡಿ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಶೋ ರೂಮ್, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದರು.