ಡಿ ಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ: ಸಚಿವ ಈಶ್ವರಪ್ಪ ಆರೋಪ
ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.
Published: 21st February 2022 09:44 AM | Last Updated: 21st February 2022 03:09 PM | A+A A-

ಸಚಿವ ಕೆ ಎಸ್ ಈಶ್ವರಪ್ಪ
ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.
ಈ ಕುರಿತು ಶಿವಮೊಗ್ಗಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಈ ಕೊಲೆ ಮಾಡಿದ್ದಾರೆ, ಈವರೆಗೆ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಇತ್ತೀಚೆಗೆ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜ ಹಾರಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರಿಂದಲೇ ಮುಸ್ಲಿಮರಿಗೆ ಕುಮ್ಮಕ್ಕು ಸಿಕ್ಕಿದೆ ಎಂದು ಕೂಡ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಮೃತದೇಹ ಕುಟುಂಬಕ್ಕೆ ಹಸ್ತಾಂತರ: ಶಿವಮೊಗ್ಗ ನಗರದಲ್ಲಿ ಮೆರವಣಿಗೆ
ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ
— K S Eshwarappa (@ikseshwarappa) February 21, 2022
ಮುಸಲ್ಮಾನ ಗೂಂಡಾಗಳಿಂದ ಕೊಲೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ.
ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ. pic.twitter.com/cFT7RYEylP
ಘಟನೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಡಿ ಕೆ ಶಿವಕುಮಾರ್ ಅವರು, ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡುತ್ತೇವೆ ಎಂದರು.