ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ನಗರದಲ್ಲಿ ಕಳೆದ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ತಿಳಿಸಿದ್ದಾರೆ.
Published: 21st February 2022 02:04 PM | Last Updated: 21st February 2022 03:25 PM | A+A A-

ಹತ್ಯೆಗೀಡಾದ ಯುವಕ ಹರ್ಷ
ಶಿವಮೊಗ್ಗ: ನಗರದಲ್ಲಿ ಕಳೆದ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು ಬೆಳಗ್ಗೆಯಿಂದ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಖುದ್ದು ನಾನೇ ರಸ್ತೆಗಳಿದು ಪರಿಶೀಲನೆ ಮಾಡುತ್ತಿದ್ದೇನೆ. ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
The police detain two people in connection with the murder of #Bhajarangadal activist Harsha in #Shivamogga. @XpressBengaluru @santwana99 @ramupatil_TNIE
— Marx Tejaswi (@_marxtejaswi) February 21, 2022
ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇಬ್ಬರನ್ನು ಬಂಧಿಸಿದ್ದು ಇನ್ನುಳಿದವರಿಗಾಗಿ ಬಲೆ ಬೀಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದರು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ: ಬೆಚ್ಚಿಬಿದ್ದ ಮಲೆನಾಡು, ಬಿಗುವಿನ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ
ಸ್ಥಳದಲ್ಲಿ ಪೊಲೀಸರು, ಆರ್ ಎಎಫ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಆಸ್ತಿ, ಪಾಸ್ತಿ ಹಾನಿ ಮಾಡಿದವರ ಮೇಲೆ ಪ್ರತ್ಯೇಕ ಕೇಸು ಹಾಕಲಾಗುವುದು ಎಂದರು.
ಹರ್ಷನ ತಾಯಿಯಿಂದ ಕೇಸು ದಾಖಲು: ಕೊಲೆಗೀಡಾದ ಹರ್ಷ ಅವರ ತಾಯಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.