ಬಜರಂಗದಳ ಕಾರ್ಯಕರ್ತನ ಹತ್ಯೆ ಸಂಬಂಧ ಮೂವರು ಆರೋಪಿಗಳ ಬಂಧನ, ಶಿವಮೊಗ್ಗದಲ್ಲಿ ಬಿಗಿ ಭದ್ರತೆ: ಆರಗ ಜ್ಞಾನೇಂದ್ರ
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
Published: 21st February 2022 06:11 PM | Last Updated: 21st February 2022 07:16 PM | A+A A-

ಆರಗ ಜ್ಞಾನೇಂದ್ರ
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ನಿನ್ನೆ (ಫೆಬ್ರವರಿ 20) ನಡೆದ ಹತ್ಯೆ ಪ್ರಕರಣದಲ್ಲಿ ಹತರಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಕಾರಿನಲ್ಲಿ ಬಂದಿದ್ದ 6 ಜನರು ಬರ್ಬರ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ ವ್ಯಾಪಕ ಹಿಂಸಾಚಾರ ಉಲ್ಬಣಗೊಂಡಿದೆ. ಶಿವಮೊಗ್ಗದಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಶಿವಮೊಗ್ಗ ನಗರದಲ್ಲಿ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ಬಿ.ಹೆಚ್. ರಸ್ತೆಯಲ್ಲಿ ಹಣ್ಣಿನ ಅಂಗಡಿ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಶೋ ರೂಮ್, ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದರು.
I met parents & sisters (of Harsha) & consoled them. They asked me for justice. I've assured them about bringing culprits to book. We have arrested 3 members. We don't want to disclose anything further at this point in time: Karnataka HM on Bajrang Dal activist Harsha murder case pic.twitter.com/FZ3i1LShhf
— ANI (@ANI) February 21, 2022
ಅಂತೆಯೇ ಶಿವಮೊಗ್ಗ ಭದ್ರತೆಗೆ ಬೆಂಗಳೂರಿನ ಪೊಲೀಸರ ನಿಯೋಜನೆ ಮಾಡಲಾಗಿದೆ. 212 ಪೊಲೀಸರನ್ನ ರಾಜ್ಯ ಸರ್ಕಾರ ಭದ್ರತೆಗೆ ನಿಯೋಜಿಸಿದೆ. ನಾಲ್ವರು ಪಿಐ, 8 PSI, 200 ಹೆಚ್ಸಿ, ಪಿಸಿ ನಿಯೋಜನೆ ಮಾಡಲಾಗಿದೆ. ಎಡಿಜಿಪಿ ಎಸ್.ಮುರುಗನ್ ಶಿವಮೊಗ್ಗಕ್ಕೆ ಕಳುಹಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿರುವುದರಿಂದ ಮಾಹಿತಿ ನೀಡಲಾಗಲ್ಲ. ಬೆಳಗ್ಗೆ ಹರ್ಷನ ತಂದೆ, ತಾಯಿಯನ್ನು ಭೇಟಿಯಾಗಿದ್ದೆವು. ನನ್ನ ಮಗನನ್ನು ತಂದುಕೊಡಲಾಗಲ್ಲ, ಸೂಕ್ತ ಕ್ರಮಕೈಗೊಳ್ಳಿ. ಬೇರೆ ಮಕ್ಕಳಿಗೆ ಇಂತಹ ಸ್ಥಿತಿ ಬರಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.
We have arrested 3 people. As per my information, 5 people are involved in this murder: Karnataka Home Minister Araga Jnanendra on Bajrang Dal activist Harsha murder case pic.twitter.com/lBmGsYvlEL
— ANI (@ANI) February 21, 2022
ಶಿವಮೊಗ್ಗದಲ್ಲಿ 1,200 ಪೊಲೀಸ್ ಸಿಬ್ಬಂದಿ ಇದ್ದು, ಬೆಂಗಳೂರಿನಿಂದಲೂ 200 ಸಿಬ್ಬಂದಿ ಕಳುಹಿಸಲಾಗಿದೆ. ಹರ್ಷ ಹತ್ಯೆಯಲ್ಲಿ ಐವರು ಭಾಗಿಯಾಗಿರುವ ಮಾಹಿತಿಯಿದೆ. ಮತ್ತೆ ಎಷ್ಟು ಜನ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಸರ್ಕಾರ ನಮ್ಮದೇ ಇದ್ದಾಗಲೂ ಹಿಂದೂ ಕಾರ್ಯಕರ್ತನ ಕೊಲೆ ಆಗಿರುವುದು ನಾಚಿಕೆಗೇಡು: ಪ್ರತಾಪ್ ಸಿಂಹ
ಅಂತೆಯೇ ಸಂಘಟನೆಗಳ ನಿಷೇಧಿಸುವ ಕೂಗಿನ ಕುರಿತು ಮಾತನಾಡಿದ ಅವರು, 'ಸದ್ಯಕ್ಕೆ ಯಾವುದೇ ಸಂಘಟನೆ ನಿಷೇಧಿಸುವ ಬಗ್ಗೆ ನಿರ್ಧರಿಸಿಲ್ಲ. ಅದಕ್ಕೆ ಕಾನೂನು ಪ್ರಕ್ರಿಯೆಗಳಿವೆ, ಮುಂದೆ ನೋಡೋಣ. ಸಮಯಾವಕಾಶ ನೋಡಿಕೊಂಡು ಸಂಘಟನೆ ನಿಷೇಧಿಸುತ್ತೇವೆ. ಯಾವುದನ್ನೂ ಬಾಯಿಬಿಟ್ಟು ಹೇಳುವಂತಹ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.