ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ: ಎನ್ಐಎ ತನಿಖೆಗೆ ಸಚಿವ ಈಶ್ವರಪ್ಪ ಆಗ್ರಹ
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆಗೆ ನೀಡಬೇಕೆಂದು ಆರ್ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ.
Published: 22nd February 2022 08:05 AM | Last Updated: 22nd February 2022 02:52 PM | A+A A-

ಮೃತ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ.
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆಗೆ ನೀಡಬೇಕೆಂದು ಆರ್ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ಐಎ ತನಿಖೆಯಿಂದ ಯಾವ ಸಂಘಟನೆ ಈ ಕೃತ್ಯದಲ್ಲಿ ಭಾಗಿಯಾಗಿದೆ ಎಂಬುದನ್ನು ಬಹಿರಂಗಪಡಿಸಬಹುದು. ಕೆಲ ಮುಸ್ಲಿಂ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಹರ್ಷನನ್ನು ಇರಿದು ಪರಾರಿಯಾಗಿದ್ದಾರೆ ಎಂದು ಕೊಲೆ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳ ಜನರು ಹೇಳಿದ್ದಾರೆ. ಕೊಲೆಯಿಂದ ಆರಂಭವಾಗಿ, ನಗರದಲ್ಲಿ ನಡೆದ ಗಲಭೆಯಿಂದ ಹಿಡಿದು ಮೆರವಣಿಗೆ ನಡೆಸುವವರೆಗೆ ಇದು ಪೂರ್ವ ಯೋಜಿತ ಪಿತೂರಿಯಂತೆ ತೋರುತ್ತದೆ. ಹೀಗಾಗಿ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ: ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ ಜಾರಿ
ಹತ್ಯೆ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ಜ್ಞಾನೇಂದ್ರ ಇಬ್ಬರೂ ಹರ್ಷ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸೋಮವಾರ ಸಾಂತ್ವನ ಹೇಳಿದರು. ಸಾಂತ್ವನ ಹೇಳಿದರು. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹರ್ಷ ಅವರ ಕುಟುಂಬಕ್ಕೆ ಭರವಸೆ ನೀಡಿರುವುದಾಗಿ ತಿಳಿಸಿದರು.
ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಕುರಿತು ವಿವರ ಸಂಗ್ರಹಿಸಲಾಗಿದೆ. ಸುಳಿವುಗಳು ಸಿಕ್ಕಿವೆ. ಆದರೆ, ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಕೃತ್ಯಕ್ಕೆ ಕಾರಣರಾದವರನ್ನು ಪತ್ತೆ ಮಾಡಲಾಗಿದ್ದು, 4-5 ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಮಾಹಿತಿ ನೀಡಿದರು.
"ಇಂತಹ ಕ್ರೌರ್ಯದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲಾಗುತ್ತದೆ. ಆರೋಪಿಗಳ ಪತ್ತೆಗೆ ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು. ಪೊಲೀಸರು ಸಾರ್ವಜನಿಕರ ಜೊತೆಗಿದ್ದು, ಪೊಲೀಸರಿಂದ ಅಗತ್ಯ ಭದ್ರತೆ ಒದಗಿಸಲಾಗುವುದು. ಹರ್ಷ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಇದೆ. ಈ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತದ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್
ಹರ್ಷ ಅವರು ಕುಟುಂಬಸ್ಥರ ಭೇಟಿ ಮಾಡಿ ಸಾಂತ್ವನ ಹೇಳಇದ ಬಳಿಕ ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ ಅವರು, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡರು.
“ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನು ಕಳೆದುಕೊಂಡಂತೆ ಅನಿಸುತ್ತಿದ. ಕೊಲೆಗಡುಕರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಘಟನೆಯಲ್ಲಿ ಐವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಹರ್ಷ ಮೇಲೆ ಹಲವು ಬಾರಿ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಇದೆ. ಜನರು ಭಾವೋದ್ವೇಗಕ್ಕೆ ಒಳಗಾಗುವ ಅಗತ್ಯವಿಲ್ಲ. ತನಿಖೆಯ ನಂತರ ಕೊಲೆಗೆ ಕಾರಣ ತಿಳಿದು ಬರಲಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು,'' ಎಂದರು.