ಬಾಲಮಂದಿರಗಳಿಂದ 141 ಮಕ್ಕಳು ನಾಪತ್ತೆ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದ ಸರ್ಕಾರಿ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ವಿವರಗಳ ಸಲ್ಲಿಸುವಂಕೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
Published: 23rd February 2022 10:13 AM | Last Updated: 23rd February 2022 01:11 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದ ಸರ್ಕಾರಿ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ವಿವರಗಳ ಸಲ್ಲಿಸುವಂಕೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ಕೋಲಾರದ ಕೆ.ಸಿ.ರಾಜಣ್ಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ಮತ್ತು ನ್ಯಾ. ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಮಕ್ಕಳ ನಾಪತ್ತೆ ಪ್ರಕರಣ ಕುರಿತು ಪೀಠವು ಗೃಹ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ನಿರ್ದೇಶಕರು ಮತ್ತು ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಿಗೆ ನೋಟಿಸ್ ಜಾರಿ ಮಾಡಿದ್ದು, ವಿವರ ಸಲ್ಲಿಸುವಂತೆ ಸೂಚಿಸಿದೆ.
ಇದನ್ನೂ ಓದಿ: ಈ ವಾರಾಂತ್ಯದೊಳಗೆ ಹಿಜಾಬ್ ಅರ್ಜಿ ವಿಚಾರಣೆ ಪೂರ್ಣಗೊಳಿಸಲು ಬಯಸುತ್ತೇವೆ: ಕರ್ನಾಟಕ ಹೈಕೋರ್ಟ್
ರಾಜ್ಯದ ಸರ್ಕಾರಿ ಮಕ್ಕಳ ಆರೈಕೆ ಕೇಂದ್ರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ಕ್ರಮಗಳು, ತನಿಖೆಯ ಸ್ಥಿತಿಗತಿಯ ವಿವರವನ್ನು ಸರ್ಕಾರ ನೀಡಬೇಕು ಎಂದು ಆದೇಶಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮಹಿಳಾ ಮತ್ತು ಮಕ್ಕಳ ಇಲಾಖೆ ಆರ್ ಟಿ ಐ ನೀಡಿರುವ ಮಾಹಿತಿಯಂತೆ 2015-16ರಿಂದ 2021ರ ಅಕ್ಟೋಬರ್ ವರೆಗೆ ರಾಜ್ಯದ ಸರ್ಕಾರಿ ಚೈಲ್ಡ್ ಕೇರ್ ಕೇಂದ್ರಗಳಿಂದ 420 ಮಕ್ಕಳು ನಾಪತ್ತೆಯಾಗಿರುವ ಪ್ರಕರಣಗಳ ಎಫ್ ಐಆರ್ ದಾಖಲಾಗಿವೆ, ಆದರೆ ಈವರೆಗೂ ಇನ್ನೂ 141 ಮಕ್ಕಳು ಪತ್ತೆಯಾಗಿಲ್ಲ. ಆ ಬಗ್ಗೆ ಪೊಲೀಸರು ತನಿಖೆಯನ್ನೂ ನಡೆಸಿಲ್ಲ .
ಇದನ್ನೂ ಓದಿ: ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನಿಗೆ ಗಾಯ
ಬಾಲ ನ್ಯಾಯ ಕಾಯಿದೆ ಪ್ರಕಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಮಕ್ಕಳ ನಾಪತ್ತೆ ಪ್ರಕರಣಗಳಿಗಾಗಿ ಪ್ರತ್ಯೇಕ ಪೊಲೀಸ್ ಘಟಕಗಳನ್ನು ಹೊಂದಿರಬೇಕು, ಆದರೆ ರಾಜ್ಯದಲ್ಲಿ ಅಂತಹ ವ್ಯವಸ್ಥೆ ಇಲ್ಲ. ಮಾಮೂಲಿ ಪೊಲೀಸ್ ದೂರು ನೀಡಿದ್ದರೂ ಏನೂ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಮಕ್ಕಳ ರಕ್ಷಣೆ ಇಲ್ಲದಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚುತ್ತಿವೆ. ಆದರೆ ಪೊಲೀಸರು ಅಂತಹ ಪ್ರಕರಣಗಳಲ್ಲಿ ಯಾವುದೇ ಕ್ರಮ ಜರುಗಿಸುತ್ತಿಲ್ಲ, ಗಂಭೀರವಾಗಿ ತನಿಖೆಯನ್ನೂ ನಡೆಸುತ್ತಿಲ್ಲ. ಕಾಟಾಚಾರಕ್ಕೆ ದೂರು ದಾಖಲಿಸಿಕೊಂಡು ಸುಮ್ಮನಾಗುತ್ತಾರೆ, ಹಾಗಾಗಿ ಇಂತಹ ಗಂಭೀರ ಪ್ರಕರಣಗಳಲ್ಲಿ ಸೂಕ್ತ ಮತ್ತು ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಬೇಕು ಅರ್ಜಿಯಲ್ಲಿ ಮನವಿ ಮಾಡಿದೆ.
ವಾದ ಆಲಿಸಿದ ಬಳಿಕ ಸರ್ಕಾರಕ್ಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ, ವಿಚಾರಣೆಯನ್ನು ಮಾ.9ಕ್ಕೆ ಮುಂದೂಡಿತು.