ಸಿಎಂ ಬೊಮ್ಮಾಯಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ: ಶಿವಮೊಗ್ಗ ಘಟನೆ ತನಿಖಾ ಪ್ರಗತಿ ಕುರಿತು ಚರ್ಚೆ
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವಕು ಸಮಗ್ರ ಮಾಹಿತಿ ನೀಡಿದ್ದಾರೆ.
Published: 24th February 2022 11:43 AM | Last Updated: 24th February 2022 03:22 PM | A+A A-

ಆರಗ ಜ್ಞಾನೇಂದ್ರ
ಬೆಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರುವಾರ ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವಕು ಸಮಗ್ರ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಆರ್‌ಟಿ ನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದ, ಗೃಹ ಸಚಿವರು, ಶಿವಮೊಗ್ಗದ ಸದ್ಯದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದರು.
ಇದನ್ನೂ ಓದಿ: ಕೋಮವಾದಿ ಅಜೆಂಡಾ ನಿಲ್ಲಿಸದಿದ್ದರೇ ಕರ್ನಾಟಕ ದ್ವೇಷದ ದಳ್ಳುರಿಯಲ್ಲಿ ದಹಿಸುವುದು: ಪ್ರಶಾಂತ್ ಭೂಷಣ್
ಈ ವೇಳೆ ಶಿವಮೊಗ್ಗ ಪರಿಸ್ಥಿತಿ ಕಂಟ್ರೋಲ್ ಮಾಡುವ ಬಗ್ಗೆ ಮಾಹಿತಿ ನೀಡಿದ್ದು, ಇಲ್ಲಿವರೆಗೂ ಆದ ಹರ್ಷನ ತನಿಖೆ ಪ್ರಗತಿ ಬಗ್ಗೆ ಬೊಮ್ಮಾಯಿ ಅವರಿಗೆ ವಿವರಣೆ ನೀಡಿದ್ದಾರೆ.
ಸಿಎಂ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪರಿಸ್ಥಿತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಪೊಲೀಸ್ ಇಲಾಖೆಗೆ ಬಜೆಟ್‍ನಲ್ಲಿ ಹಣ ಮೀಸಲಿಡುವ ಬಗ್ಗೆ ಚರ್ಚೆ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಪೊಲೀಸರ ವೈಫಲ್ಯ ಏನು ಇಲ್ಲ ಎಂದು ಹೇಳಿದರು.
"ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಶಾಂತಿಯುತವಾಗಿವೆ. ಅಲ್ಲಿನ ಅಧಿಕಾರಿಗಳೊಂದಿಗೆ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ. ಶಿವಮೊಗ್ಗದ ಜನರಿಗೆ ನನ್ನ ಅಭಿನಂದನೆಗಳು" ಎಂದು ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ: ಅಪರಾಧ ಸಾಬೀತುಪಡಿಸಿ, ಶಿಕ್ಷೆ ಕೊಡಿಸುವುದರಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಮೌಲಿಕ ಸೇವೆ-ಆರಗ ಜ್ಞಾನೇಂದ್ರ
ಇವತ್ತು ರಮಣಗುಪ್ತ ಅವರು ಶಿವಮೊಗ್ಗಕ್ಕೆ ತೆರಳುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ತೆ ಕಾಪಾಡಲು ರಮಣಗುಪ್ತ ಅವರನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬಳಿಕ ಹರ್ಷನ ಹತ್ಯೆ ತನಿಖೆಯನ್ನು ಉನ್ನತ ಮಟ್ಟದ ತನಿಖೆಗೆ ವಹಿಸುವ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಪ್ರಕರಣವು ವಿಚಾರಣೆಯ ಹಂತದಲ್ಲಿ ಇದ್ದು, ಈ ಹಂತದಲ್ಲಿ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರಕರಣದ ವಿಚಾರಣೆ ಎಲ್ಲಾ ಹಂತದಲ್ಲೂ ತನಿಖೆ ನಡೆಸಲಾಗುತ್ತಿದೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಸದ್ಯಕ್ಕಂತೂ ಬೇರೆ ಸಂಸ್ಥೆಯ ತನಿಖೆ ಬಗ್ಗೆ ಯಾವುದೇ ಆಲೋಚನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.