ಅವೆನ್ಯೂ ರಸ್ತೆ ಸ್ಮಾರ್ಟ್ ಸಿಟಿ ಕಾಮಗಾರಿ ಮುಕ್ತಾಯಕ್ಕೆ ಮಾರ್ಚ್'ವರೆಗೆ ಗಡುವು
ಅವೆನ್ಯೂ ರಸ್ತೆಯಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೇಳಿದ್ದಾರೆ.
Published: 25th February 2022 10:28 AM | Last Updated: 25th February 2022 01:20 PM | A+A A-

ಅವೆನ್ಯೂ ರಸ್ತೆ.
ಬೆಂಗಳೂರು: ಅವೆನ್ಯೂ ರಸ್ತೆಯಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೇಳಿದ್ದಾರೆ.
ಮೈಸೂರು ಬ್ಯಾಂಕ್ ವೃತ್ತದಿಂದ ಎಸ್ ಜೆ ಪಿ ರಸ್ತೆಯನ್ನು ಸಂಪರ್ಕಿಸುವ ಸುಮಾರು 1.02 ಕಿ.ಮೀ ಉದ್ದದ ಅವೆನ್ಯೂ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ಯನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಅಧ್ಯಕ್ಷ ರಾಕೇಶ್ ಸಿಂಗ್ ಅವರು ಗುರುವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಅವೆನ್ಯೂ ರಸ್ತೆಯಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಅವೆನ್ಯೂ ರಸ್ತೆಯಲ್ಲಿನ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಇಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಮಾರ್ಚ್ ಒಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ ಎಂದು ಹೇಳಿದ್ದಾರೆ.
ಕಾಮಗಾರಿ ಕಾರ್ಯಗಳ ಮಾರ್ಚ್ ಒಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ. ಪಾದಚಾರಿಗಳು ಪಾದಚಾರಿ ಮಾರ್ಗಗಳನ್ನೇ ಬಳಕೆ ಮಾಡಬೇಕು. ನಾಗರೀಕರಿಗೆ ಯಾವುದೇ ಸಮಸ್ಯೆಗಳಾದಂತೆ ಗುತ್ತಿಗೆದಾರರು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ಅವೆನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದ ಸುಂದರೀಕರಣ, ಅಗ್ನಿಶಾಮಕ ಘಟಕಗಳ ಸ್ಥಾಪನೆ, ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡುವಂತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ವರ್ತಕರು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ರಾಕೇಶ್ ಸಿಂಗ್, ಈ ಕುರಿತು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ವ್ಯಾಪಾರಸ್ಥರು, ಮತ್ತೊಂದು ಗಡುವು ನೀಡಲಾಗಿದೆ. ಈ ಗಡುವಿನೊಳಗೂ ಕಾಮಗಾರಿ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ. ಏಕೆಂದರೆ, ಪ್ರತೀ ಬಾರಿ ರಸ್ತೆಯನ್ನು ಅಗೆಯಲಾಗುತ್ತದೆ. ಮತ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.