ಕಾಮಗಾರಿ ಕಾರ್ಯ ಹಿನ್ನೆಲೆ ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
ಬೈಯ್ಯಪ್ಪನಹಳ್ಳಿ-ವೈಟ್ ಫೀಲ್ಡ್ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾ.2ರಿಂದ ಸೆಪ್ಟೆಂಬರ್ ವರೆಗೆ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲುಗಳು ಪ್ಲಾಟ್ ಫಾರಂ 3ರಿಂದ ಮಾತ್ರ ಕಾರ್ಯಾಚರಿಸಲಿವೆ.
Published: 26th February 2022 11:08 AM | Last Updated: 26th February 2022 12:03 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಬೈಯ್ಯಪ್ಪನಹಳ್ಳಿ-ವೈಟ್ ಫೀಲ್ಡ್ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾ.2ರಿಂದ ಸೆಪ್ಟೆಂಬರ್ ವರೆಗೆ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲುಗಳು ಪ್ಲಾಟ್ ಫಾರಂ 3ರಿಂದ ಮಾತ್ರ ಕಾರ್ಯಾಚರಿಸಲಿವೆ.
ನಮ್ಮ ಮೆಟ್ರೋ ಮಾಧ್ಯಮ ಪ್ರಕಟಣೆಯೊಂದನ್ನು ಪ್ರಕಟಿಸಿದ್ದು, ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೈಯ್ಯಪ್ಪನಹಳ್ಳಿ-ವೈಟ್ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನೇರಳೆ ಮಾರ್ಗದ (ಪರ್ಪಲ್ ಲೈನ್) ರೈಲುಗಳ ಕಾರ್ಯಾಚರಣೆ ಆರಂಭವಾಗುವ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು: ನಿವಾಸಿಗಳ ದೂರಿನ ನಂತರ ರಾತ್ರಿ ಕೆಲಸ ನಿಲ್ಲಿಸಿದ ಬಿಎಂಆರ್ ಸಿಎಲ್
ಲಾಟ್ಫಾರಂ 3ರಿಂದ ಮಾತ್ರವೇ ಆಗಮನ, ನಿರ್ಗಮನ ಸಂಚಾರ ನಿರ್ವಹಿಸಲಾಗುತ್ತಿದೆ. ಮಾರ್ಚ್ 2ರಿಂದ ಆರಂಭಿಸಿ ಮುಂದಿನ 6 ತಿಂಗಳ ಕಾಲದಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಿದೆ.
ಪ್ರಸ್ತುತ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣವನ್ನು ವಿಸ್ತರಣಾ ಮಾರ್ಗದ ಮೊದಲ ಪಿಲ್ಲರ್ಗೆ ಜೋಡಿಸುವ ಕೆಲಸ ನಡೆಯುತ್ತಿದೆ ಎಂದು ಹಿರಿಯ ಮೆಟ್ರೋ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೊ: ಸುರಂಗ ಕೊರೆಯುವ ಯಂತ್ರ 'ವರದ' ಮತ್ತೆ ಕಾರ್ಯಾರಂಭ
ನಾವು ಕೆಲವು ಟ್ರ್ಯಾಕ್ಗಳನ್ನು ತೆಗೆದುಹಾಕಬೇಕಿದ್ದು, ಅವುಗಳನ್ನು ಸುಮಾರು 400 ಮೀಟರ್ ದೂರಕ್ಕೆ ರಿಲೇ ಮಾಡಬೇಕು, ಗ್ರೇಡಿಂಗ್ ಕಾರ್ಯವನ್ನು ನಿರ್ವಹಿಸಬೇಕು ಮತ್ತು ಗೋಡೆಯ ಎತ್ತರವನ್ನು ಹೆಚ್ಚಿಸಬೇಕು. ಈ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ನಮಗೆ ಆಗಸ್ಟ್ ಅಥವಾ ಸೆಪ್ಟೆಂಬರ್ ವರೆಗೆ ಸಮಯ ಬೇಕಾಗುತ್ತದೆ. ಆದ್ದರಿಂದ ಹೀಗಾಗ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ.
ಈ ವರ್ಷದ ಡಿಸೆಂಬರ್ ವೇಳೆಗೆ ವಿಸ್ತರಣಾ ಮಾರ್ಗವನ್ನು ವಾಣಿಜ್ಯ ಕಾರ್ಯಾಚರಣೆಗೆ ನಿಗದಿಪಡಿಸಲಾಗಿದೆ. ಬೈಯಪ್ಪನಹಳ್ಳಿ ಟರ್ಮಿನಲ್ ಸ್ಟೇಷನ್ ಆಗಿರುವುದರಿಂದ ಎಲ್ಲಾ ಪ್ಲಾಟ್ಫಾರ್ಮ್ಗಳಲ್ಲಿ ಜನಸಂದಣಿಯಿಂದ ಗಿಜಿಗುಡುತ್ತಿದೆ. BMRCL ಅಧಿಕಾರಿಗಳಿಗೆ ಪದೇ ಪದೇ ಕರೆ ಮಾಡಿದರೂ ಒಂದೇ ಪ್ಲಾಟ್ಫಾರ್ಮ್ನಲ್ಲಿ ಸಂಪೂರ್ಣ ಪ್ರಯಾಣಿಕರ ದಟ್ಟಣೆಯನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬ ವಿವರಗಳು ಇನ್ನೂ ಸ್ಪಷ್ಟವಾಗುತ್ತಿಲ್ಲ ಎಂದು ಬಿಎಂಆರ್'ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.