ಕೋವಿಡ್ ಸಂಕಷ್ಟ ಹಿನ್ನೆಲೆ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ: ಮಾಜಿ ಸಿಎಂ ಯಡಿಯೂರಪ್ಪ
ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
Published: 27th February 2022 11:22 AM | Last Updated: 27th February 2022 12:29 PM | A+A A-

ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು: ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಆತ್ಮೀಯರೇ, ಹಿತೈಷಿಗಳೇ, ಕೊರೋನಾ ಸಂಕಷ್ಟಗಳ ಹಿನ್ನಲೆಯಲ್ಲಿ, ನಾಳೆ ನನ್ನ ಹುಟ್ಟಿದ ದಿನವನ್ನು ಯಾವುದೇ ವಿಶೇಷ ರೀತಿಯಲ್ಲಿ ನಾನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಯಾರೂ ಕೂಡ ಹಾರ, ತುರಾಯಿ, ಉಡುಗೊರೆ ಇತ್ಯಾದಿ ತರಬೇಡಿ ಎಂದು ಕೋರುತ್ತೇನೆ. ನೀವು ಇದ್ದಲ್ಲಿಂದಲೇ ಹಾರೈಸಿ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಆಶೀರ್ವಾದಗಳೇ ನನಗೆ ಶ್ರೀರಕ್ಷೆ ಎಂದು ಹೇಳಿದ್ದಾರೆ.
80ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ
ಕರ್ನಾಟಕದ ರಾಜಕಾರಣದಲ್ಲಿ 'ರಾಜಾಹುಲಿ' ಎಂದೇ ಜನಪ್ರಿಯವಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇಂದು ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರು ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.