
ನವದಂಪತಿಗೆ ಶುಭ ಹಾರೈಸಿದ ಬಿಎಸ್ವೈ
ಬೆಂಗಳೂರು: ಬೆಂಗಳೂರಿನಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಕಲ್ಯಾಣ ಕಾರ್ಯಕ್ರಮ ನೆರವೇರಿತು.
ಅರಮನೆ ಆವರಣದಲ್ಲಿ ನಡೆದ ಮದುವೆ ಆರತಕ್ಷತೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಿ ನೂತನ ದಂಪತಿಗಳಿಗೆ ಆಶೀರ್ವದಿಸಿದರು.
ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರ ಮೊಮ್ಮಗಳು ಸುಷ್ಮಾ ಹಾಗೂ ಕಿಶನ್ ಅವರ ಮದುವೆ ಕಾರ್ಯಕ್ರಮ ಫೆಬ್ರವರಿ 11ರಂದು ಆಂಧ್ರಪ್ರದೇಶದ ತಿರುಪತಿ ತಿರುಮಲದಲ್ಲಿ ನಡೆದಿತ್ತು.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.