ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಅವಧಿಯ ಲೀಸ್ ಕಂ ಸೇಲ್‌ಗೆ ನೀಡಲು ಸರ್ಕಾರ ಮುಂದು!
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ ಎರಡು ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ (ಲೀಸ್ ಕಂ ಸೇಲ್ )ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
Published: 02nd January 2022 11:59 AM | Last Updated: 02nd January 2022 11:59 AM | A+A A-

ಸಚಿವ ಮುರುಗೇಶ್ ಆರ್. ನಿರಾಣಿ
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ ಎರಡು ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ (ಲೀಸ್ ಕಂ ಸೇಲ್ )ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ ಅವರು ‘ಹೊಸ ವರ್ಷದ ಬಂಪರ್ ಕೊಡುಗೆ’ ನೀಡಿದ್ದಾರೆ.
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಇತರ ಪಾಲುದಾರರೊಂದಿಗೆ ಮಾತುಕತೆ ನಡೆಸಿದ ನಂತರ ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟ ಇತ್ತೀಚೆಗಷ್ಟೇ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದು, ಪ್ರಸ್ತುತದ ನೀತಿಯಿಂದಾಗಿ ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. "ಕೆಐಎಡಿಬಿ ಭವಿಷ್ಯದಲ್ಲಿ ಎಲ್ಲಾ ಭೂಮಿಯನ್ನು ಖಾಸಗಿ ಕೈಗಾರಿಕೆಗಳು/ಸಂಸ್ಥೆಗಳಿಗೆ 10 ವರ್ಷಗಳ ಗುತ್ತಿಗೆ ಕಮ್ ಮಾರಾಟದ ಆಧಾರದ ಮೇಲೆ ನೀಡಲಿದೆ. ಹೊಸ ಯೋಜನೆಗೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಪೂರ್ಣ ಪ್ರಮಾಣದ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಸ್ತಾವಿತ ತಿದ್ದುಪಡಿಯ ಮೂಲಕ, ಯಾವುದೇ ಕೈಗಾರಿಕಾ ಘಟಕವು ಭೂ ಹಂಚಿಕೆಯ ನಂತರ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರೆ, ಅವರು ಹತ್ತು ವರ್ಷಗಳವರೆಗೆ ಕಾಯದೆ ಕೆಐಎಡಿಬಿಯಿಂದ ಮಾರಾಟ ಪತ್ರವನ್ನು ಪಡೆಯಲು ಅರ್ಹರಾಗಿತ್ತಾರೆ. ಇಲಾಖೆಯು ತನ್ನ ಅಧಿಕಾರಿಗಳ ಮೂಲಕ ಉದ್ಯಮದ 24 ತಿಂಗಳ ಬ್ಯಾಲೆನ್ಸ್ ಶೀಟ್ ಪರಿಶೀಲಿಸಿ ಎಲ್ಲವೂ ನಿಯಮ ಬದ್ಧವಾಗಿದ್ದರೆ, ಸೇಲ್ ಡೀಡ್ ಕೊಡಲಾಗುತ್ತದೆ. ಇದರಿಂದ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಅನುಕೂಲವಾಗುತ್ತದೆ.
ಕೆಐಎಡಿಬಿ ನಿಯಮಗಳ ಪ್ರಕಾರ, ಎಂಎಸ್ಎಂಇ ವಲಯಗಳು ಭೂಮಿಯನ್ನು ಹಂಚಿಕೆ ಮಾಡಿದ ದಿನಾಂಕದಿಂದ ಮೂರು ವರ್ಷಗಳೊಳಗೆ ಉದ್ಯಮವನ್ನು ಸ್ಥಾಪಿಸಿ, ಉತ್ಪಾದನೆಯನ್ನು ಪ್ರಾರಂಭಿಸಬೇಕು. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಐದು ವರ್ಷಗಳ ಸಮಯವನ್ನು ನೀಡಲಾಗಿದೆ. "ತಿದ್ದುಪಡಿಯು ಉದ್ಯಮದ ವಿಸ್ತರಣೆ ಮತ್ತು ಇನ್ನೂ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸುತ್ತದೆ, ಏಕೆಂದರೆ ಉದ್ಯಮಿಗಳು ಕಂಪನಿಯನ್ನು ಯಶಸ್ವಿಯಾಗಿ ನಡೆಸಿದ ನಂತರ ಮಂಜೂರು ಮಾಡಿದ ಭೂಮಿ ಅವರ ಮಾಲೀಕತ್ವದಲ್ಲಿ ಇರುತ್ತದೆ ಎಂದು ತಿಳಿಸಿದ್ದಾರೆ.