social_icon

ಕರ್ನಾಟಕದಲ್ಲಿ ಕೊರೋನಾ, ಓಮಿಕ್ರಾನ್ ಹೆಚ್ಚಳ: ನಾಳೆ ಸಂಜೆ ತಜ್ಞರ ಜೊತೆ ಸಿಎಂ ಸಭೆ, ಚರ್ಚೆ; ಕಠಿಣ ಕ್ರಮ ಜಾರಿ?

ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ ಓಮಿಕ್ರಾನ್(Omicron) ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ.

Published: 03rd January 2022 09:59 AM  |   Last Updated: 03rd January 2022 01:40 PM   |  A+A-


CM Basavaraja Bommai

ಸಿಎಂ ಬಸವರಾಜ ಬೊಮ್ಮಾಯಿ

Online Desk

ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19  ಮತ್ತು Omicron  ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.

ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ ಓಮಿಕ್ರಾನ್ (Omicron) ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 

ನಾಳೆ ಸಂಜೆ ತಜ್ಞರ ಜೊತೆ ಸಭೆ, ಗುರುವಾರ ಸಂಪುಟ ಸಭೆ: ಬೆಂಗಳೂರಿನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಈ ಸಂದರ್ಭದಲ್ಲಿ ಜನರು ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಓಮಿಕ್ರಾನ್ ಸೋಂಕಿನ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ಸುಳಿವನ್ನು ಸಿಎಂ ನೀಡಿದ್ದಾರೆ.

ಇಂದು ರಾಜ್ಯಾದ್ಯಂತ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ. ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.


Stay up to date on all the latest ರಾಜ್ಯ news
Poll
Rajasthan Chief Minister Ashok Gehlot and Congress leader Sachin Pilot ( File Photo | PTI)

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವು ಈ ವರ್ಷ ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಾನಿ ಮಾಡುತ್ತದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp