ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಕೃಷ್ಣ ಬೈರೇಗೌಡ ನೇಮಕ
ರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
Published: 03rd January 2022 08:00 AM | Last Updated: 03rd January 2022 12:06 PM | A+A A-

ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೆಲವು ವೈಯಕ್ತಿಕ ಕಾರಣಗಳನ್ನು ನೀಡಿರುವ ರಮೇಶ್ ಕುಮಾರ್ ಅವರು ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ನೇಮಕಗೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಕೃಷ್ಣ ಭೈರೇಗೌಡ ಅವರನ್ನು ನೇಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಸುವರ್ಣಸೌಧ ಪ್ರವೇಶಿಸಲು ಬಿಡಬೇಡಿ, ರಮೇಶ್ ಕುಮಾರ್ ಅವರನ್ನು ಪಕ್ಷದಿಂದ ಕಿತ್ತೊಗೆಯಿರಿ: ಕಾಂಗ್ರೆಸ್ ಗೆ ಶೋಭಾ ಆಗ್ರಹ
ಸಾರ್ವಜನಿಕ ಲೆಕ್ಕ ಸಮಿತಿಯ ಅಧ್ಯಕ್ಷರಾಗದಿದ್ದರೂ ರಮೇಶ್ ಕುಮಾರ್ ಅವರು 20 ಸದಸ್ಯರ ಪಿಎಸಿ ಸದಸ್ಯರಾಗಿ ಮುಂದುವರಿಯುತ್ತಾರೆಂದು ತಿಳಿದುಬಂದಿದೆ.
ಪಿಎಸಿ ಸರ್ಕಾರದ ವೆಚ್ಚವನ್ನು ಪರಿಶೀಲಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಮತ್ತು ಯಾವುದೇ ಗಮನಾರ್ಹ ವ್ಯತ್ಯಾಸಗಳ ಬಗ್ಗೆ ತನಿಖೆಗಳನ್ನು ನಡೆಸುತ್ತದೆ. ಡಿಸೆಂಬರ್ 27 ರಂದು ಸ್ಪೀಕರ್ ಪಿಎಸಿ ಸೇರಿದಂತೆ ಆರು ಸ್ಥಾಯಿ ಸಮಿತಿಗಳನ್ನು ರಚಿಸಿದ್ದರು.
48 ವರ್ಷದ ಬೈರೇಗೌಡ ಅವರು ಪಿಎಸಿಯ ಕಿರಿಯ ಅಧ್ಯಕ್ಷರಾಗಿದ್ದು, ಈ ಹುದ್ದೆಯನ್ನು ಈ ಹಿಂದೆ ಹಿರಿಯ ಕಾಂಗ್ರೆಸ್ ನಾಯಕ ಎಚ್‌ಕೆ ಪಾಟೀಲ್ ಅವರು ನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಕಾಂಗ್ರೆಸ್ ಖಂಡನೆ
ಇತ್ತೀಚೆಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಮೇಶ್ ಕುಮಾರ್ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ಅವರಿಗೆ ಈ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಹೇಳಲಾಗುತ್ತಿದೆ.