ಬೆಂಗಳೂರು: ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯಲು ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದ ಶಾಲೆ!
ಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪೋಷಕರಿಗೆ ಸಂದೇಶ ರವಾನಿಸಿದೆ.
Published: 04th January 2022 11:44 AM | Last Updated: 04th January 2022 11:44 AM | A+A A-

ಮಕ್ಕಳಿಗೆ ಕೋವಿಡ್ ಲಸಿಕೆ
ಬೆಂಗಳೂರು: ಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪೋಷಕರಿಗೆ ಸಂದೇಶ ರವಾನಿಸಿದೆ.
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಮ್ಮ ಶಾಲೆಯಲ್ಲಿಯೇ ಲಸಿಕಾ ಶಿಬಿರವನ್ನು ಆಯೋಜಿಸಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಓಮಿಕ್ರಾನ್ ಭೀತಿ ನಡುವೆ ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣ: ದೈಹಿಕ ತರಗತಿ ಸ್ಥಗಿತಗೊಳಿಸಿದ ಕೆಲ ಶಾಲೆಗಳು!!
“ಬೋರ್ಡ್ ಪರೀಕ್ಷೆ ಬರೆಯಲು ಲಸಿಕೆ ಪ್ರಮಾಣಪತ್ರ ಅತ್ಯಗತ್ಯ. ಇಂದು ಗೈರುಹಾಜರಾದ ಹುಡುಗಿಯರಿಗೆ ನೀವು ಇಷ್ಟಪಡುವ ಸ್ಥಳದಲ್ಲಿಯೇ ಲಸಿಕೆ ಹಾಕಿಸಬೇಕು. ಈ ವಾರದೊಳಗೆ ನೀವು ಲಸಿಕೆ ಹಾಕಿಸಿಕೊಂಡ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಇದು ಕಡ್ಡಾಯವಾಗಿದೆ ಮತ್ತು ಪ್ರತಿಯೊಬ್ಬಬ್ಬರು ಅದನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಶಾಲೆಯಿಂದ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ತಿಳಿಸಿಲಾಗಿದೆ.
ಇದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಲಸಿಕೆಗೆ ವಿರುದ್ಧವಾಗಿಲ್ಲ. ಆದರೆ ಬಲವಂತದ ಮಾರ್ಗ ಅನುಸರಿಸುವುದು ಸರಿಯಲ್ಲ. ಮಕ್ಕಳಲ್ಲಿ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಸಾಕಷ್ಟು ಮಾಹಿತಿ ಇಲ್ಲ. ಮುಂದಿನ ಕೆಲವು ವಾರಗಳಲ್ಲಿ ಲಸಿಕೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಲು ಬಯಸುತ್ತೇವೆ... ಮಕ್ಕಳು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಿ, ನಂತರ ಅವರಿಗೆ ಲಸಿಕೆಯನ್ನು ನೀಡಲಾಗುತ್ತದೆ” ಎಂದು ಪೋಷಕರು ಹೇಳಿದ್ದಾರೆ.
ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಶಾರ್ಲೆಟ್, ವಿದ್ಯಾರ್ಥಿಗಳು ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿದ್ದೇವೆ ಎಂದು ಖಚಿತಪಡಿಸಿದ್ದಾರೆ ಮತ್ತು ಶಿಕ್ಷಣ ಇಲಾಖೆಯ ನಿರ್ದೇಶನದ ಮೇರೆಗೆ ತಾವು ಹಾಗೆ ಮಾಡಿರುವುದಾಗಿ ತಿಳಿಸಿದ್ದಾರೆ.