ಕಠಿಣ ನಿಯಮ ಜಾರಿ: ಸಚಿವಾಲಯ ನೌಕರರಿಗೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ “ಓಮಿಕ್ರಾನ್” ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುವ...
Published: 05th January 2022 04:51 PM | Last Updated: 05th January 2022 04:51 PM | A+A A-

ವಿಧಾನ ಸೌಧ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ “ಓಮಿಕ್ರಾನ್” ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳಿಗೆ ಬುಧವಾರ ಸುತ್ತೋಲೆ ಹೊರಡಿಸಿದೆ.
ಅತ್ಯಗತ್ಯ ಸೇವೆಗಳನ್ನೊದಗಿಸುತ್ತಿರುವ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಕೊರೋನಾ 2ನೇ ಅಲೆಗೆ ಹೋಲಿಸಿದರೆ 3ನೇ ಅಲೆ ಅಪಾಯ ಅಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ: ಡಾ ಕೆ ಸುಧಾಕರ್
ಗ್ರೂಪ್ ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಮತ್ತು ಗ್ರೂಪ್ ಬಿ.ಸಿ. ಹಾಗೂ ಡಿ ವೃಂದದ ಸಿಬ್ಬಂದಿಗಳು ಶೇ.50 ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಕೋವಿಡ್ ಕರ್ತವ್ಯಕ್ಕಾಗಿ ನಿಯೋಜಿಸಿದ್ದ ಅಧಿಕಾರಿ ನೌಕರರು ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು. ದೃಷ್ಟಿಹೀನ ಮತ್ತು ಇತರ ದೈಹಿಕ ವಿಕಲಚೇತನ ಅಧಿಕಾರಿ, ಸಿಬ್ಬಂದಿ ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.