ಆದ್ಯತೆ ಮೇರೆಗೆ ಸ್ವ-ಸಹಾಯ ಗುಂಪುಗಳಿಗೆ ಸಾಲ ನೀಡಲಾಗುತ್ತದೆ: ಸಚಿವ ಸೋಮಶೇಖರ್
ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್ಎಚ್ಜಿ) ಶೇ.100 ರಷ್ಟು ಸಾಲ ಮರುಪಾವತಿ ಇರುವುದರಿಂದ ಆದ್ಯತೆಯ ಮೇರೆಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.
Published: 05th January 2022 08:24 AM | Last Updated: 05th January 2022 12:08 PM | A+A A-

ಸೋಮಶೇಖರ್
ಮೈಸೂರು: ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್ಎಚ್ಜಿ) ಶೇ.100 ರಷ್ಟು ಸಾಲ ಮರುಪಾವತಿ ಇರುವುದರಿಂದ ಆದ್ಯತೆಯ ಮೇರೆಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ.
ಕೆ.ಆರ್.ಕ್ಷೇತ್ರದಲ್ಲಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ನಗರದ ವಿದ್ಯಾಶಂಕರ ಕಲ್ಯಾಣ ಮಂಟಪದಲ್ಲಿ ಸರ್ಕಾರ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಬೃಹತ್ ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಉದ್ಯೋಗ ನೋಂದಾವಣಿ ಹಾಗೂ ಉದ್ಯೋಗ ಸೃಷ್ಟಿಸುವ ಮೇಳವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಕೃಷಿ ಉದ್ದೇಶಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯಲು ಬೇಕಾದ ಅರ್ಹತೆ ಮಾನದಂಡಗಳು ಇವು
ಈ ಉದ್ಯೋಗ ಮೇಳದಲ್ಲಿ ಎರಡು ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಿ ಮಾತನಾಡಿದ ಸೋಮಶೇಖರ್ ಅವರು, ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರು ಮಾಡುವಂತೆ ಜಿಲ್ಲಾ ಸಹಕಾರಿ ಬ್ಯಾಂಕ್ಗಳಿಗೆ ಸರ್ಕಾರ ಶಿಫಾರಸು ಮಾಡಲಿದೆ. ರಾಜ್ಯಾದ್ಯಂತ ರೈತರಿಗೆ 30,600 ಕೋಟಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. ಇದರಲ್ಲಿ ಸ್ವಸಹಾಯ ಗುಂಪುಗಳೂ ಕೂಡ ಇವೆ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಅನೇಕ ಯುವಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಹೆಸರು ನೋಂದಾಯಿಸಿಕೊಂಡವರು ಮುಂದಿನ ಐದು ವರ್ಷಗಳ ಕಾಲ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಪಡೆಯಲಿದ್ದಾರೆ ಎಂದು ರಾಮದಾಸ್ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೊರೋನಾ ಲಾಕ್ಡೌನ್ ಎಫೆಕ್ಟ್: 2 ವರ್ಷದಲ್ಲಿ ರಾಜ್ಯದ ಸಾಲ 78 ಸಾವಿರ ಕೋಟಿ ರೂ. ಹೆಚ್ಚಳ!