ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ
ಕನಕಪುರದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಟ್ರಕ್ ನಾಲ್ಕು ಕಾರುಗಳು ಮತ್ತು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಮತ್ತು ಒಬ್ಬ ಟೀಚರ್ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.
Published: 07th January 2022 11:27 PM | Last Updated: 08th January 2022 03:16 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಕನಕಪುರದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಟ್ರಕ್ ನಾಲ್ಕು ಕಾರುಗಳು ಮತ್ತು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಮತ್ತು ಒಬ್ಬ ಟೀಚರ್ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.
ಮೃತರನ್ನು ಅಭಿಲಾಷ್ (25), ಮೊಹಮ್ಮದ್ ಫಾಜಿಲ್ (25), ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ಮತ್ತು ಇನ್ನೊಬ್ಬ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಎಲ್ಲರೂ ಕೇರಳ ಮೂಲದವರು.
ರಾತ್ರಿ 9.45ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಲ್ವರು ವ್ಯಾಗನ್ ಆರ್ ಕಾರಿನಲ್ಲಿ ಬನ್ನೇರುಘಟ್ಟ ರಸ್ತೆಯಿಂದ ಕನಕಪುರ ಕಡೆಗೆ ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ ತಮಿಳುನಾಡಿನಿಂದ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ನಂತರ ಮೂರು ಕಾರುಗಳು ಮತ್ತು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಸ್ಥಳದಿಂದ ಓಡಿಹೋಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಎಲ್ಲ ವಾಹನಗಳನ್ನು ವಶಕ್ಕೆ ಪಡೆದು ನೈಸ್ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಟ್ರಕ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.