ವಿಶ್ರಾಂತಿ ಪಡೆದು ಪಾದಯಾತ್ರೆಗೆ ಸಿದ್ಧರಾದ ಸಿದ್ದರಾಮಯ್ಯ
ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂಚೂಣಿಯಿಂದ ಮುನ್ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಮೇಕೆದಾಟು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ.
Published: 08th January 2022 08:30 AM | Last Updated: 08th January 2022 01:49 PM | A+A A-

ಸಿದ್ದರಾಮಯ್ಯ
ಮೈಸೂರು: ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂಚೂಣಿಯಿಂದ ಮುನ್ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಮೇಕೆದಾಟು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ಏನೇ ಆದರೂ ಪಾದಯಾತ್ರೆಯಿಂದ ಹಿಂದೆ ಸರಿಯುವುದಿಲ್ಲ, ಶಿವಕುಮಾರ್ ಅವರ ಜೊತೆ ಬೆಂಗಳೂರಿನವರೆಗೂ ನಡೆಯುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಅವರು, ಪಾದಯಾತ್ರೆಗಾಗಿ ಹೊಸ ಶೂ, ಮೆಡಿಕಲ್ ಕಿಟ್, ಕ್ಯಾಪ್, ವ್ಯಾಸಲೀನ್, ವಾಟರ್ ಬಾಟಲ್ ಗಳೊಂದಿಗೆ ತಮ್ಮ ಬ್ಯಾಗ್ ಸಿದ್ಧಪಡಿಸಿಕೊಂಡಿದ್ದಾರೆ.
ಪಾದಯಾತ್ರೆಗೂ ಮುನ್ನ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿದ್ದ ಸಿದ್ದರಾಮಯ್ಯ ಅವರು, ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್ನಲ್ಲಿ ಕೆಲವು ಕಾಂಗ್ರೆಸ್ ಮುಖಂಡರೊಂದಿಗೆ ಎರಡು ದಿನ ವಿಶ್ರಾಂತಿ ಪಡೆದಿದ್ದಾರೆ.
ಇದನ್ನೂ ಓದಿ: ಪ್ರಶಸ್ತಿಯೊಂದಿಗೆ ಬಂದ 1 ಲಕ್ಷಕ್ಕೆ ಮತ್ತೆ ಒಂದು ಲಕ್ಷ ರು. ಹಣ ಸೇರಿಸಿ ಮಠಕ್ಕೆ ವಾಪಸ್ ನೀಡಿದ ಸಿದ್ದರಾಮಯ್ಯ
160 ಕಿ.ಮೀ ಕ್ರಮಿಸುವ 10 ದಿನಗಳ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಜೊತೆಗೆ ಅವರ ವೈಯಕ್ತಿಕ ಸಿಬ್ಬಂದಿ ಮತ್ತು ಗನ್ಮ್ಯಾನ್ ಕೂಡ ಭಾಗವಹಿಸಲಿದ್ದಾರೆ.
74 ವರ್ಷ ವಯಸ್ಸಾಗಿರುವ ಸಿದ್ದರಾಮಯ್ಯ ಅವರು ಪಾದಯಾತ್ರೆಯಲ್ಲಿ ನಾನೂ ಭಾಗವಹಿಸುತ್ತೇನೆ. ಇದಕ್ಕಾಗಿ ಮಾನಸಿಕವಾಗಿ ಸಿದ್ಧನಿದ್ದೇನೆಂದು ಹೇಳಿದಾಗ ನಿಜಕ್ಕೂ ಶಾಕ್ ಆಯಿತು. ಅವರಿಗಿಂತ ಚಿಕ್ಕವನಾಗಿರುವುದರಿಂದ 10 ದಿನಗಳ ಪಾದಯಾತ್ರೆಯಲ್ಲಿ ನಾನು ನಿರ್ಧರಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಸತ್ಯತೆಗಳನ್ನು ಬಹಿರಂಗಪಡಿಸುವ ಪಕ್ಷದ ಹೋರಾಟಕ್ಕೆ ನಾನೂ ಬೆಂಬಲ ನೀಡುತ್ತೇನೆಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.