ರಾಜ್ಯದಲ್ಲಿ ಇಂದಿನಿಂದ ಬೂಸ್ಟರ್ ಡೋಸ್ ವಿತರಣೆ: 21 ಲಕ್ಷ ಮಂದಿ ಲಸಿಕೆ ಪಡೆಯಲು ಅರ್ಹ
ಕೋವಿಡ್–19 ವಿರುದ್ಧ ದೇಹ ಇನ್ನಷ್ಟು ನಿರೋಧಕ ಶಕ್ತಿ ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಇಂದಿನಿಂದ ಮುಂಚೂಣಿ ಕಾರ್ಯಕರ್ತರು, ಹಿರಿಯರಿಗೆ ಇಂದಿನಿಂದ ಬೂಸ್ಟರ್ ಲಸಿಕೆಗಳನ್ನು ನೀಡುವ ಕಾರ್ಯ ಆರಂಭವಾಗಲಿದೆ.
Published: 10th January 2022 09:25 AM | Last Updated: 10th January 2022 01:30 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕೋವಿಡ್–19 ವಿರುದ್ಧ ದೇಹ ಇನ್ನಷ್ಟು ನಿರೋಧಕ ಶಕ್ತಿ ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಇಂದಿನಿಂದ ಮುಂಚೂಣಿ ಕಾರ್ಯಕರ್ತರು, ಹಿರಿಯರಿಗೆ ಇಂದಿನಿಂದ ಬೂಸ್ಟರ್ ಲಸಿಕೆಗಳನ್ನು ನೀಡುವ ಕಾರ್ಯ ಆರಂಭವಾಗಲಿದೆ.
ರಾಜ್ಯದಾದ್ಯಂತ ಆರು ಲಕ್ಷ ಆರೋಗ್ಯ ಕಾರ್ಯಕರ್ತರು, ಏಳು ಲಕ್ಷ ಮುಂಚೂಣಿ ಕಾರ್ಯಕರ್ತರು ಮತ್ತು ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ 60 ವರ್ಷಕ್ಕಿಂತ ಮೇಲ್ಪಟ್ಟ ಎಂಟು ಲಕ್ಷ ಜನರು ಇಂದಿನಿದ ಆರಂಭವಾಗುವ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಹಿಂದಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ) ಇಂದು ಬೆಳಿಗ್ಗೆ 10 ಗಂಟೆಗೆ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡವರು ಅದೇ ಲಸಿಕೆ ಹಾಕಿಸಿಕೊಳ್ಳಬೇಕು. ಇದರಲ್ಲಿ ಮಿಕ್ಸ್ ಅಂಡ್ ಮ್ಯಾಚ್ ಇರುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ರಾಷ್ಟ್ರದಲ್ಲಿ ಕೋವಿಡ್ 19 ರೂಪಾಂತರಿ ತಳಿ ಒಮೈಕ್ರಾನ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗದುಕೊಳ್ಳಲಾಗಿದೆ.
ಇದನ್ನೂ ಓದಿ: ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಸಿಎಂ ಬೊಮ್ಮಾಯಿ ಚಾಲನೆ
ಮುನ್ನೆಚ್ಚರಿಕೆಯ ಲಸಿಕೆ ಡೋಸ್ಗಳಿಗೆ ತೆಗೆದುಕೊಳ್ಳುವವರು ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅರ್ಹರು ನೇರವಾಗಿ ಲಸಿಕೆ ಹಾಕಿಸಿಕೊಳ್ಳಲು ಸಮಯ ನಿಗದಿಪಡಿಸಿಕೊಳ್ಳಬಹುದು ಅಥವಾ ನೇರವಾಗಿ ಯಾವುದೇ ಲಸಿಕೆ ಕೇಂದ್ರಕ್ಕೆ ಹೋಗಬಹುದು. ಪ್ರಸ್ತುತ ಮುಂಚೂಣಿ ಕಾರ್ಯಕರ್ತರು, ಹಿರಿಯರಿಗೆ ಮಾತ್ರ ಬೂಸ್ಟರ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಎಲ್ಲ ವಯೋಮಾನದವರಿಗೂ ಬೂಸ್ಟರ್ ಡೋಸ್ ನೀಡುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.
ಆರೋಗ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವವರು, ಪೊಲೀಸ್ ಸೇರಿದಂತೆ ಇನ್ನಿತರ ಮುಂಚೂಣಿ ಕಾರ್ಯಕರ್ತರು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಂತಹ ಸಹ ಅಸ್ವಸ್ಥತೆಗಳನ್ನು ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪಡೆಯುವ ಆಯ್ಕೆ ಹೊಂದಿರುತ್ತಾರೆ.
ಬೂಸ್ಟರ್ ಲಸಿಕೆಗಳನ್ನು ತೆಗೆದುಕೊಳ್ಳಲು ಅರ್ಹರಾಗಿರುವವರು, ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮಾತ್ರ ಪಡೆಯಬಹುದು.
ಇದನ್ನೂ ಓದಿ: ಕೋವಿಡ್-19: ಬೂಸ್ಟರ್ ಡೋಸ್ ಪಡೆದ ಸಚಿವ ಬಿ.ಸಿ.ಪಾಟೀಲ್
ಮೊದಲ ಮತ್ತು ಎರಡನೇ ಡೋಸ್ ನಲ್ಲಿ ಸ್ವೀಕರಿಸಿದ ಲಸಿಕೆಯನ್ನೇ ಮೂರನೇ ಡೋಸ್ ನಲ್ಲಿಯೂ ಪಡೆಯಬೇಕು. ಕೋವಿಶಿಲ್ಡ್ ತೆಗೆದುಕೊಂಡಿದ್ದವರು ಮತ್ತೆ ಕೋವಿಶಿಲ್ಡ್ ಅನ್ನೇ ತೆಗೆದುಕೊಳ್ಳಬೇಕು. ಕೋ ವ್ಯಾಕ್ಸಿನ್ ತೆಗೆದುಕೊಂಡಿದ್ದವರು ಬೂಸ್ಟರ್ ಡೋಸ್ ಆಗಿ ಅದನ್ನೇ ತೆಗೆದುಕೊಳ್ಳಬೇಕು. ಇದರಲ್ಲಿ ಯಾವುದೇ ಮಿಕ್ಸ್ ಅಂಡ್ ಮ್ಯಾಚ್ ಇರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
ಕೊರೊನಾ ಯೋಧರು, ಆರೋಗ್ಯ ರಕ್ಷಣೆ ಮತ್ತು ಮುಂಚೂಣಿ ಕಾರ್ಯಕರ್ತರು ದೇಶವನ್ನು ಸುರಕ್ಷಿತವಾಗಿರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ. ಆದ್ದರಿಂದ ಮುನ್ನೆಚ್ಚರಿಕೆಯ ದೃಷ್ಟಿಯಿಂದ, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ “ಮುನ್ನೆಚ್ಚರಿಕೆ ಡೋಸ್” ಅನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ಡಿಸೆಂಬರ್ 25 ರಂದು ಪ್ರಧಾನಿ ಮೋದಿ ಹೇಳಿದ್ದರು.
ಒಮೈಕ್ರಾನ್ ಚಾಲಿತ ಕೋವಿಡ್ ಕೋವಿಡ್ ಸೋಂಕಿಗೆ ಈಗಾಗಲೇ ಅನೇಕ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಒಳಗಾಗಿದ್ದಾರೆ. ಅವರಲ್ಲಿ ಹಲವರು ಎರಡನೇ ಬಾರಿಗೆ ಸೋಂಕಿಗೆ ಒಳಗಾಗಿದ್ದಾರೆ. ವಿಶೇಷವಾಗಿ ಮಹಾನಗರಗಳಲ್ಲಿ ಸೋಂಕು ಹೆಚ್ಚಾಗಿದೆ.
ಮೂರನೇ ಡೋಸ್ ಲಸಿಕೆಯು ಒಮೈಕ್ರಾನ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವುದರ ವಿರುದ್ಧ 88 ಪ್ರತಿಶತದಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ತಜ್ಞರ ಅಧ್ಯಯನ ತಿಳಿಸಿದೆ.