ಹಿರಿಯ ಸಾಹಿತಿ ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಸಂತಾಪ
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Published: 10th January 2022 10:30 AM | Last Updated: 10th January 2022 01:33 PM | A+A A-

ಹಿರಿಯ ಸಾಹಿತಿ ಚಂಪಾ
ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನ ಚಂದ್ರಶೇಖರ್ ಪಾಟೀಲ್ ಚಂಪಾ ಎಂದೇ ಪ್ರಸಿದ್ಧರಾದವರು, ಅವರೊಬ್ಬ ಕ್ರಾಂತಿಕಾರಿ ಸಾಹಿತಿ, ಕನ್ನಡ ನಾಡು- ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು, ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಸಿಎಂ ಬಣ್ಣಿಸಿದ್ದಾರೆ.
ಇದನ್ನೂ ಓದಿ: ಕಳಚಿದ ಸಾಹಿತ್ಯ ಲೋಕದ ಕೊಂಡಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ
ಚಂಪಾ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ ಎಂದು ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಾಹಿತಿ, ವಿಮರ್ಶಕ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ @BSBommai ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) January 10, 2022
ಚಂಪಾ ಎಂದೇ ಪ್ರಸಿದ್ಧರಾದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಡು-ನುಡಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. (1/2)
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ಧೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ದು:ಖಿತನಾಗಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ದ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನದಿಂದ ದು:ಖಿತನಾಗಿದ್ದೇನೆ.
— Siddaramaiah (@siddaramaiah) January 10, 2022
ಇವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
ಭಾವಪೂರ್ಣ ಶ್ರದ್ಧಾಂಜಲಿ.
pic.twitter.com/Og7mxLyWkW
ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) January 10, 2022
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದು:ಖವನ್ನುಂಟು ಮಾಡಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. 1/2 pic.twitter.com/VRDbCvGdJE
— H D Kumaraswamy (@hd_kumaraswamy) January 10, 2022