ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ, ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ: ಪುತ್ರ, ಸೊಸೆಗೂ ಕೋವಿಡ್ ಪಾಸಿಟಿವ್
ಕೋವಿಡ್ ಪಾಸಿಟಿವ್ ಎಂದು ತಿಳಿದುಬಂದ ನಂತರ ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಗಳವಾರ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.
Published: 11th January 2022 11:28 AM | Last Updated: 11th January 2022 03:09 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೋವಿಡ್ ಪಾಸಿಟಿವ್ ಎಂದು ತಿಳಿದುಬಂದ ನಂತರ ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಗಳವಾರ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.
ಇಂದು ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿರುವ ಸಿಎಂ ಬೊಮ್ಮಾಯಿ, ಮಣಿಪಾಲ್ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ತೆರಳಿದ್ದರು. ಅಲ್ಲಿ ವೈದ್ಯರು ನೀಡಿರುವ ಸಲಹೆ ಮೇರೆಗೆ ತಪಾಸಣೆಗೆ ಮತ್ತು ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ನೀಡಿದ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ಸಿಎಂಗೆ ಕೊರೋನಾ ಪಾಸಿಟಿವ್ ಇದ್ದು, ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ನಿನ್ನೆ ಸಂಜೆ ಗೊತ್ತಾಗಿತ್ತು. ನಂತರ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಪ್ರಾಥಮಿಕವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಸಿಎಂ ಆಸ್ಪತ್ರೆಯಲ್ಲಿ ದಾಖಲಾಗುತ್ತಾರೆಯೋ, ಇಲ್ಲ ಚಿಕಿತ್ಸೆ ಪಡೆದು ಬಂದು ಹೋಂ ಕ್ವಾರಂಟೈನ್ ಗೆ ಒಳಗಾಗುತ್ತಾರೆಯೋ ಎಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ.
ಸಿಎಂ ಮಗ, ಸೊಸೆಗೂ ಕೊರೋನಾ: ಇನ್ನು ಸಿಎಂ ಬೊಮ್ಮಾಯಿ ಅವರ ಪುತ್ರ ಭರತ್ ಮತ್ತು ಸೊಸೆಗೂ ಕೊರೋನಾ ಪಾಸಿಟಿವ್ ಬಂದಿದ್ದು ಅವರು ಕೂಡ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದು, ಮೂವರೂ ಇಂದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.