ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ಎಮ್ ರೇವಣ್ಣಗೆ ಕೊವಿಡ್ ಪಾಸಿಟಿವ್
ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ ಎಮ್ ರೇವಣ್ಣಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.
Published: 11th January 2022 01:29 PM | Last Updated: 11th January 2022 03:13 PM | A+A A-

ಎಚ್.ಎಂ ರೇವಣ್ಣ
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ ಎಮ್ ರೇವಣ್ಣಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು ಜನವರಿ 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಲ್ಲಿದ್ದರೂ ಲೆಕ್ಕಿಸದ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಹೀಗೆ ಕೊವಿಡ್ ನಿಯಮಗಳನ್ನ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೋನಾ, ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ: ಪುತ್ರ, ಸೊಸೆಗೂ ಕೋವಿಡ್ ಪಾಸಿಟಿವ್
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಇಂದು ತಜ್ಞರೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಲಿದ್ದಾರೆ.