
ಲಸಿಕೆ ಹಾಕಿಸಿಕೊಳ್ಳುತ್ತಿರುವ ರಾಜ್ಯಪಾಲರು
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್(ಬೂಸ್ಟರ್) ಲಸಿಕೆ ತೆಗೆದುಕೊಂಡರು.
ನಂತರ ಮಾತನಾಡಿದ ರಾಜ್ಯಪಾಲರು, ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಇದನ್ನು ಓದಿ: ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಸೋಮವಾರ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ -19 'ಮುನ್ನೆಚ್ಚರಿಕೆ' ಬೂಸ್ಟರ್ ಡೋಸ್ ಅನ್ನು ಪಡೆಯುತ್ತಿದ್ದಾರೆ.