ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಗಿಫ್ಟ್: ದುಪ್ಪಟ್ಟು ವೇತನ ಹೆಚ್ಚಳ!
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಂಕ್ರಾಂತಿ ಗಿಫ್ಟ್ ಪ್ರಕಟಿಸಿದೆ.
Published: 14th January 2022 07:40 PM | Last Updated: 14th January 2022 07:48 PM | A+A A-

ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಂಕ್ರಾಂತಿ ಗಿಫ್ಟ್ ಪ್ರಕಟಿಸಿದೆ. ದುಪ್ಪಟ್ಟು ವೇತನ ಹೆಚ್ಚಳ ಮಾಡಲಾಗಿದ್ದು, ಸೆಮಿಸ್ಟರ್-ವಾರು ನೇಮಕಾತಿ ನಿಲ್ಲಿಸಿ ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿಕೊಳ್ಳುವುದಾಗಿ ಘೋಷಿಸಿದೆ.
ಸರ್ಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ ಎಂದು ತಿಳಿಸಿದರು.
5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.
ನಮ್ಮೆಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಒಳಗೆ ಸಿಹಿ ಸುದ್ದಿ ಕೊಡುವ ಭರವಸೆ ನೀಡಿದ್ದೆವು. ಅಂತೆಯೇ ಮಾನ್ಯ ಮುಖ್ಯಮಂತ್ರಿ @BSBommai ಅವರ ನೇತೃತ್ವದ ನಮ್ಮ @BJP4Karnataka ಸರ್ಕಾರ ಸಂಕ್ರಾಂತಿ ಹಬ್ಬವಾದ ಇಂದು ಆ ಭರವಸೆಯನ್ನು ನೆರವೇರಿಸಿದೆ.
— Dr. Ashwathnarayan C. N. (@drashwathcn) January 14, 2022
ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. https://t.co/q1p4GZJGoP pic.twitter.com/WSbC5s4tAX
Today's Media Bulletin 14/01/2022
— K'taka Health Dept (@DHFWKA) January 14, 2022
Please click on the link below to view bulletin.https://t.co/ds0Y7nQ6Ai@PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/2p2FPXEv94