ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿಗೆ ಕೊರೋನಾ ಪಾಸಿಟಿವ್: ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕೋವಿಡ್ ಪಾಸಿಟಿವ್ ಸೋಂಕಿಗೆ ತುತ್ತಾಗಿ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.
Published: 16th January 2022 09:07 AM | Last Updated: 16th January 2022 01:13 PM | A+A A-

ನಾಡೋಜ ಚೆನ್ನವೀರ ಕಣವಿ
ಹುಬ್ಬಳ್ಳಿ/ಧಾರವಾಡ: ಕೋವಿಡ್ ಪಾಸಿಟಿವ್ ಸೋಂಕಿಗೆ ತುತ್ತಾಗಿ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.
ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಅವರು ಮೊನ್ನೆ ಜನವರಿ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸುಧಾರಣೆಯಾಗಿದ್ದು ನಿಗಾವಹಿಸಲು ಐಸಿಯುಗೆ ವರ್ಗಾಯಿಸಲಾಗಿದೆ.
ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. pic.twitter.com/v2vVky003C
— Basavaraj S Bommai (@BSBommai) January 16, 2022