ಬೆಂಗಳೂರು: ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಕಾಂಗ್ರೆಸ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರೋಧ
ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. #saynotosankrit ಎನ್ನುವ ಹ್ಯಾಷ್ ಟ್ಯಾಗ್ ಅಭಿಯಾನ ವೈರಲ್ ಆಗುತ್ತಿದೆ.
Published: 17th January 2022 06:26 PM | Last Updated: 17th January 2022 06:31 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಅಸ್ತು ದೊರೆತ ಹಿನ್ನೆಲೆಯಲ್ಲಿಯೇ ಕರ್ನಾಟಕ ಕಾಂಗ್ರೆಸ್ ಈ ವಿವಿ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದೆ. ಕೆಪಿಸಿಸಿ ವಕ್ತಾರ ಎ.ಎನ್. ನಟರಾಜ್ ಗೌಡ ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
ರಾಜ್ಯಸರ್ಕಾರ ಇತ್ತೀಚಿಗಷ್ಟೆ ಮಾಗಡಿಯಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಕುರಿತು ಘೋಶಹಣೆ ಮಾಡಿತ್ತು. ಅದಕ್ಕಾಗಿ 100 ಎಕರೆ ಜಾಗವನ್ನು ಮೀಸಲಿರಿಸಲಾಗಿದೆ. ಅಲ್ಲದೆ ಕಾಮಗಾರಿಗಾಗಿ 359 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುತ್ತಿದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಗಿಫ್ಟ್: ದುಪ್ಪಟ್ಟು ವೇತನ ಹೆಚ್ಚಳ!
ಈ ಬಗ್ಗೆ ಟ್ವಿಟ್ಟರ್ ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. #saynotosankrit ಎನ್ನುವ ಹ್ಯಾಷ್ ಟ್ಯಾಗ್ ಅಭಿಯಾನ ವೈರಲ್ ಆಗುತ್ತಿದೆ. ಕಾಂಗ್ರೆಸ್ ಮಾತ್ರವಲ್ಲದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕೂಡಾ ಸಂಸ್ಕೃತ ವಿವಿ ನಿರ್ಮಾಣವನ್ನು ವಿರೋಧಿಸಿದೆ. ರಾಜ್ಯದಲ್ಲಿ ಸಂಸ್ಕೃತ/ ಹಿಂದಿ ಹೇರಿಕೆ ವಿರುದ್ಧ ರಾಜ್ಯ PFI ಅಧ್ಯಕ್ಷ ಯಾಸಿರ್ ಹಸನ್ ದನಿಯೆತ್ತಿದ್ದಾರೆ.
ಇದನ್ನೂ ಓದಿ: ಭಾಷೆಯೊಂದು ಸತ್ತರೆ, ಅದರಲ್ಲಿನ ಶ್ರೀಮಂತ ಸಂಸ್ಕೃತಿಯೂ ನಶಿಸುತ್ತದೆ: ಬಿ.ಕೆ ಹರಿಪ್ರಸಾದ್