ರಾಜ್ಯದಲ್ಲಿ ಇಂದು ಕೊರೋನಾದಿಂದ 14 ಸಾವು, ಬೆಂಗಳೂರಿನಲ್ಲಿ 15,947 ಸೇರಿ 27,156 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 27,156 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
Published: 17th January 2022 08:19 PM | Last Updated: 17th January 2022 08:33 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 27,156 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 32,47243 ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 14 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 38445ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಬೆಂಗಳೂರಿನಲ್ಲಿ ಓಮಿಕ್ರಾನ್ ಸ್ಫೋಟ: ಇಂದು 287 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆ!
ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಶೇ. 12.45ಕ್ಕೆ ಕುಸಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು 15,947 ಮಂದಿಗೆ ಸೋಂಕು ದೃಢಪಟ್ಟಿದ್ದು, ಐವರು ಕೊರೋನಾದಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 7,827 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,17,297 ಸಕ್ರಿಯ ಪ್ರಕರಣಗಳಿದ್ದು, ಇಂದು 2,17,998 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
Test positivity rate drops significantly to 12.45% as new cases dip:
— Dr Sudhakar K (@mla_sudhakar) January 17, 2022
◾New cases in State: 27,156
◾New cases in B'lore: 15,947
◾Positivity rate in State: 12.45%
◾Discharges: 7,827
◾Active cases State: 2,17,297 (B'lore- 158k)
◾Deaths:14 (B'lore- 05)
◾Tests: 2,17,998
ಇಂದಿನ 17/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/spgeOcG8nZ@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/LXHC80MRrn
— K'taka Health Dept (@DHFWKA) January 17, 2022