ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು ಬೆಂಗಳೂರಿನಲ್ಲಿ 25,595 ಸೇರಿ 41,457 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 41,457 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು...
Published: 18th January 2022 06:58 PM | Last Updated: 18th January 2022 06:58 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 41,457 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ 41 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 22.30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಏಳು ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೋನಾದಿಂದ ಇಂದು 20 ಮಂದಿ ಮೃತಪಟ್ಟಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.
ಇದನ್ನು ಓದಿ: ಮಡಿಕೇರಿ: ಉತ್ತರ ಪ್ರದೇಶ ಮೂಲದ 29 ವಲಸೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 25,595 ಮಂದಿಗೆ ಸೋಂಕು ದೃಢಪಟ್ಟಿದ್ದು, ಏಳು ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 8,353 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,50,381 ಸಕ್ರಿಯ ಪ್ರಕರಣಗಳಿದ್ದು, ಇಂದು 1,85,872 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
Test positivity rate crosses 22% as cases spike to 41k today:
— Dr Sudhakar K (@mla_sudhakar) January 18, 2022
◾New cases in State: 41,457
◾New cases in B'lore: 25,595
◾Positivity rate in State: 22.30%
◾Discharges: 8,353
◾Active cases State: 2,50,381 (B'lore- 178k)
◾Deaths:20 (B'lore- 07)
◾Tests: 1,85,872#COVID