ನಾಡೋಜ, ಕವಿ ಚೆನ್ನವೀರ ಕಣವಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ; ಆರೋಗ್ಯದಲ್ಲಿ ಚೇತರಿಕೆ
ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ.
Published: 18th January 2022 07:36 AM | Last Updated: 18th January 2022 01:09 PM | A+A A-

ಚೆನ್ನವೀರ ಕಣವಿ
ಧಾರವಾಡ: ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ಶೀತ ಮತ್ತು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚೆನ್ನವರ ಕಣವಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಪರೀಕ್ಷೆ ನಡೆಸಿದಾಗ ಅವರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಕಣವಿಯವರು ಸಾಹಿತ್ಯ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಯಾವುದೇ ಹಣಕಾಸಿನ ಸಮಸ್ಯೆಯಿಂದಲ್ಲ, ಆದರೆ ಗೌರವದ ಸಂಕೇತವಾಗಿ ಸರ್ಕಾರ ಅವರ ಚಿಕಿತ್ಸೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತೊಬ್ಬ ಕವಿ ಸಿದ್ದಲಿಂಗಯ್ಯ ಪಟ್ಟಣ ಶೆಟ್ಟಿ ಹೇಳಿದ್ದಾರೆ.
ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥಿಸುತ್ತೇವೆ. ಕೋವಿಡ್ ಕಾರಣ , ನಾವು ಯಾರನ್ನು ಭೇಟಿಯಾಗಲು ಸಾಧ್ಯವಿಲ್ಲ. ನಾನು ನೋಡಿದಂತೆ, ಅವರು ಆತ್ಮವಿಶ್ವಾಸ ಮತ್ತು ಭರವಸೆಯ ವ್ಯಕ್ತಿಯಾಗಿದ್ದು, ಇದು ಅವರನ್ನು ಎತ್ತರಕ್ಕೆ ಏರುವಂತೆ ಮಾಡಿದೆ. ಅವರು ಚೇತರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿಗೆ ಕೊರೋನಾ ಪಾಸಿಟಿವ್: ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕಣವಿ ಅವರ ಆರೋಗ್ಯದ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿರುವುದಕ್ಕೆ ಮತ್ತೊಬ್ಬ ಲೇಖಕರೊಬ್ಬರು ಶ್ಲಾಘಿಸಿದ್ದಾರೆ. "ಇಂತಹ ಕಾರ್ಯವು ಭರವಸೆಯನ್ನು ಹೆಚ್ಚಿಸುತ್ತದೆ. ಆಡಳಿತ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ" ಎಂದು ಅವರು ಹೇಳಿದರು. ಜಿಲ್ಲಾಡಳಿತವು ಆಸ್ಪತ್ರೆಯ ಆರೋಗ್ಯ ತಜ್ಞರೊಂದಿಗೆ ಸಂಪರ್ಕದಲ್ಲಿದೆ. ಕಣವಿ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.