ಇದು ನನ್ನ ನಿರ್ಧಾರ, ನಾನು ಮಾಸ್ಕ್ ಧರಿಸಲ್ಲ: ಸಚಿವ ಉಮೇಶ್ ಕತ್ತಿ ಉದ್ಧಟತನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ. ಆದರೆ, ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದಾರೆ.

Published: 19th January 2022 08:56 AM  |   Last Updated: 19th January 2022 02:20 PM   |  A+A-


Umesh Katti

ಉಮೇಶ್ ಕತ್ತಿ

Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ನುರಿತ ತಜ್ಞರ ಜತೆ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ. ಆದರೆ, ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದಾರೆ. 

ಅಥಣಿ ಪಟ್ಟಣದಲ್ಲಿ ಲಕ್ಷ್ಮೀ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಉಮೇಶ್ ಕತ್ತಿಯವರು, ಕೇಂದ್ರ ಸರ್ಕಾರ ಕೊರೋನಾ ನಿಯಮಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಿದೆ. ಕಳೆದ ಎರಡು ದಿನದ ಹಿಂದೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಸ್ಕ್ ಧರಿಸುವುದು ಬಿಡುವುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಹೀಗಾಗಿ ನಾನು ಮಾಸ್ಕ್ ಧರಿಸುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕೊರೋನಾ ಮಾರ್ಗಸೂಚಿ ಪಾಲಿಸದ ಬಿಜೆಪಿಗರ ಮೇಲೆ ಕೇಸ್ ಹಾಕಲು ಡಿಕೆಶಿ ಪ್ಲಾನ್?

ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದಾರೆ . ಯಾವುದೇ ನಿರ್ಬಂಧ ವಿಧಿಸಲ್ಲ. ಸ್ವಂತ ಜವಾಬ್ದಾರಿ ಹೊತ್ತು ಜನ  ಮಾಸ್ಕ್​​ ಹಾಕಿಕೊಳ್ಳಬೇಕು. ಮಾಸ್ಕ್​​ ಹಾಕೋದು ಬಿಡೋದು ಅದು ಅವರವರ ಆಯ್ಕೆ. ಮಾಸ್ಕ್​​ ಹಾಕದೆ ಇರೋದು ನನ್ನ ವೈಯಕ್ತಿಕ ವಿಚಾರ. ನಾನು ಮಾಸ್ಕ್​​ ಹಾಕಲ್ಲ ನನಗೆ ಮಾಸ್ಕ್​​ ಹಾಕಬೇಕೆಂದು ಅನಿಸಿಲ್ಲ. ಹಾಗಾಗಿ ನಾನು ಧರಿಸಲ್ಲ ಎಂದು ತಿಳಿಸಿದರು.

ಸಚಿವರ ಈ ಹೇಳಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆಯೇ ಹೇಳಿಕೆ ಕುರಿತು ಯೂಟರ್ನ್ ಹೊಡೆದ ಕತ್ತಿಯವರು, ಮಾಸ್ಕ್ ಹಾಕುವ ವಿಚಾರದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಪಾಲಿಸಬೇಕು ಅನ್ನುವುದು ನನ್ನ ನಿಲುವು. ಅದೇ ನನ್ನ ಹೇಳಿಕೆಯೂ ಆಗಿತ್ತು. ನಾನು ಮಾಸ್ಕ್ ಹಾಕಬೇಡಿ ಎಂದು ಯಾರಿಗೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳೋದು ಬೇಡ. ರಾಜ್ಯ ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ನನಗೆ, ನನ್ನ ಜವಾಬ್ದಾರಿಯ ಸಂಪೂರ್ಣ ಅರಿವಿದೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕೋವಿಡ್ ನಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಮಗೆಲ್ಲರಿಗೂ ನಮ್ಮ ಹೊಣೆಗಾರಿಕೆ ಬಗ್ಗೆ ತಿಳಿದಿದೆ. ಹೀಗಾಗಿ ಕೋವಿಡ್ ಮುಗಿಯುವ ತನಕ ನಾವೆಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ ಎಂದರು.


Stay up to date on all the latest ರಾಜ್ಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp