ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಗ್ರೀನ್ ಸಿಗ್ನಲ್: 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವ ಭರವಸೆ
ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
Published: 21st January 2022 08:36 AM | Last Updated: 21st January 2022 08:36 AM | A+A A-

ಶಿರಾಡಿ ಘಾಟ್ ರಸ್ತೆ
ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.
ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ.