ಜನರು ಶಿಸ್ತುಬದ್ಧವಾಗಿದ್ದರೆ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್, ಕರ್ಫ್ಯೂ ಅಗತ್ಯವಿಲ್ಲ: ಸಚಿವೆ ಶೋಭಾ ಕರಂದ್ಲಾಜೆ
ದೇಶಾದ್ಯಂತ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಜನರು ಶಿಸ್ತುಬದ್ಧವಾಗಿ ನಡೆದುಕೊಂಡರೆ ಲಾಕ್ಡೌನ್ ಮತ್ತು ಕರ್ಫ್ಯೂ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.
Published: 22nd January 2022 12:42 PM | Last Updated: 22nd January 2022 01:36 PM | A+A A-

ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಜನರು ಶಿಸ್ತುಬದ್ಧವಾಗಿ ನಡೆದುಕೊಂಡರೆ ಲಾಕ್ಡೌನ್ ಮತ್ತು ಕರ್ಫ್ಯೂ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.
ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಕೋವಿಡ್ ನಿಯಮಗಳನ್ನು ನಿಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಕೊರೋನಾ ಜೊತೆಗೆ ಬದುಕುವುದನ್ನು ನಾವು ಕಲಿಯಬೇಕು. ಕಳೆದ ಕೆಲವು ತಿಂಗಳುಗಳಿಂದ ನಾವು ಈ ವೈರಸ್ನ ಉಪಸ್ಥಿತಿಯಲ್ಲಿ ವಾಸಿಸುತ್ತಿದ್ದೇವೆ. ಕರ್ಫ್ಯೂಗಳು ಜನರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ ಎಂಬುದು ನನಗೆ ತಿಳಿದಿದೆ. ಜನರು ಶಿಸ್ತುಬದ್ಧರಾಗಿದ್ದರೆ ಲಾಕ್ಡೌನ್ ಮತ್ತು ಕರ್ಫ್ಯೂ ಅಗತ್ಯವಿರುವುದಿಲ್ಲ. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
ಇದನ್ನೂ ಓದಿ: ಕೋವಿಡ್-19: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ; ನೈಟ್ ಕರ್ಫ್ಯೂ ಮುಂದುವರಿಕೆ
ಸರ್ಕಾರ ಹಾಗೂ ಆರೋಗ್ಯ ಇಲಾಖೆ ಕೂಡ ಕರ್ಫ್ಯೂ ಹಾಗೂ ಲಾಕ್ಡೌನ್ ಜಾರಿಗೆ ತರುವುದಕ್ಕೂ ಮುನ್ನ ತಜ್ಞರ ಅಭಿಪ್ರಾಯವನ್ನು ಕೇಳಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಹೋಟೆಲ್ ವ್ಯವಹಾರಗಳಲ್ಲಿ ತೊಡಗಿರುವವರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.