ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಂಪೂರ್ಣ ಸಜ್ಜು

ಇದೇ ಬುಧವಾರ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಪ್ರಧಾನ ಸಮಾರಂಭಕ್ಕಾಗಿ ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್ ಮೈದಾನ ಸಂಪೂರ್ಣ ಸಜ್ಜಾಗಿದೆ. 

Published: 24th January 2022 01:22 PM  |   Last Updated: 24th January 2022 02:10 PM   |  A+A-


Casual_Photos1

ಸಾಂದರ್ಭಿಕ ಚಿತ್ರ

Online Desk

ಬೆಂಗಳೂರು: ಇದೇ ಬುಧವಾರ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಪ್ರಧಾನ ಸಮಾರಂಭಕ್ಕಾಗಿ ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್ ಮೈದಾನ ಸಂಪೂರ್ಣ ಸಜ್ಜಾಗಿದೆ. 

ಕೋವಿಡ್-19 ಹರಡುವಿಕೆ ತಡೆ ನಿಟ್ಟಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು, ಅತಿ ಗಣ್ಯ ವ್ಯಕ್ತಿಗಳು, ಮಿಲಿಟರಿ, ಬಿಎಸ್ ಎಫ್ ಸೇರಿದಂತೆ ಹಿರಿಯ ಅಧಿಕಾರಿಗಳು, ಮಾಧ್ಯಮದವರು ಒಳಗೊಂಡಂತೆ ಪಾಸ್ ಹೊಂದಿರುವ 200 ಜನರಿಗೆ ಮಾತ್ರ ಪ್ರವೇಶವನ್ನು ಸೀಮಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯಮಂತ್ರಿ ಗೌರವ್ ಗುಪ್ತಾ ಜಂಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
 
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಧ್ವಜಾರೋಹಣ ಮತ್ತು ಕವಾಯತ್ ಉದ್ಘಾಟನೆ ಮಾಡಲಿದ್ದು, ಸಮಾರಂಭಕ್ಕೆ ಆಗಮಿಸುವವರು ಬೆಳಗ್ಗೆ 80-40ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು, ಅಲ್ಲದೇ ತಪ್ಪದೇ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ  ಕಾಯ್ದುಕೊಳ್ಳುವಂತೆ ಕೋರಲಾಗಿದೆ. ಬಿಬಿಎಂಪಿ ವತಿಯಿಂದ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸುವವರು ಅನಗತ್ಯವಾದ ಲಗೇಜು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರು, 15 ವರ್ಷದೊಳಗಿನ ಮಕ್ಕಳಿಗೆ ಗಣರಾಜ್ಯೋತ್ಸವ ಪರೇಡ್‌ಗೆ ಅವಕಾಶವಿಲ್ಲ

ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾ ವಹಿಸಲು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ಬ್ಯಾಗೇಜ್ ಸ್ಕ್ಯಾನರ್ ಗಳನ್ನು ಅಳವಡಿಸಲಾಗಿದೆ.  ನಗರದ ಸಿವಿಎಲ್ ಮತ್ತು ಸಂಚಾರ ಪೊಲೀಸ್ ಸೇರಿದಂತೆ ಒಟ್ಟು 11 ಡಿಸಿಪಿ,  20 ಎಸಿಪಿ, 60 ಪೊಲೀಸ್ ಇನ್ಸ್ ಪೆಕ್ಟರ್, 125 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಳಗೊಂಡಂತೆ ಒಟ್ಟು 1600 ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.


Stay up to date on all the latest ರಾಜ್ಯ news
Poll
CM Basavaraja Bommai is press meet

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕಾಲ ಸನ್ನಿಹಿತ ಎಂಬ ಭಾವನೆ ಇದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp