ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ
2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಪ್ರಕಟಿಸಿದೆ.
Published: 25th January 2022 07:20 PM | Last Updated: 25th January 2022 07:20 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರ ಪ್ರಕಟಿಸಿದೆ.
ಇಂದು ಪ್ರಕಟಿಸಿದ ಅಂತಿಮ ವೇಳಾಪಟ್ಟಿಯ ಪ್ರಕಾರ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ಇದನ್ನು ಓದಿ: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 8 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.
ಮಹಾಮಾರಿ ಕೊರೋನಾ ವೈರಸ್ ಅಬ್ಬರದ ನಡುವೆಯೂ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಈಗ ಮುಖ್ಯಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.