ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಗೆ ಕೋವಿಡ್ ಸೋಂಕು
ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ,
Published: 26th January 2022 01:52 PM | Last Updated: 26th January 2022 01:52 PM | A+A A-

ಗೌರವ್ ಗುಪ್ತ
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ. ಹಾಗಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಾಗೂ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ
ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿಲ್ಲ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು
ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಬಿದ್ದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು' ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ.— Gaurav Gupta (@BBMPCOMM) January 26, 2022