ಅಪೆಕ್ಸ್, ಡಿಸಿಸಿ ಬ್ಯಾಂಕ್ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು, ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರುಗಳನ್ನು ಒಳಗೊಂಡ ನಿಯೋಗ ಗುರುವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು.
Published: 27th January 2022 11:12 PM | Last Updated: 28th January 2022 01:24 PM | A+A A-

ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು, ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರುಗಳನ್ನು ಒಳಗೊಂಡ ನಿಯೋಗ ಗುರುವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಸಂಬಂಧಪಟ್ಟಂತೆ ಹಾಗೂ ಕೃಷಿ ಸಾಲ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಯಲ್ಲಿ ಪ್ರಸ್ತಾಪಿಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಹಕಾರ ಸಂಘಗಳ ನಿಬಂಧಕರಾದ ಎಸ್.ಜಿಯಾವುಲ್ಲಾ, ಸಹಕಾರ ಸಂಘಗಳ ಅಪರ ನಿಬಂಧಕರು (ಪತ್ತು) ಎ.ಸಿ.ದಿವಾಕರ್ ಹಾಗೂ ಅಪೆಕ್ಸ್ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ದೇವರಾಜ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.