ಮಾರ್ಚ್ ಅಂತ್ಯದೊಳಗೆ ಸಾರಿಗೆ ಸುಧಾರಣಾ ವರದಿ
ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳು ಈ ವರ್ಷದ ಮಾರ್ಚ್ ಅಂತ್ಯದವರೆಗೆ ರೂ. 2,130 ನಷ್ಟವನ್ನು ಎದುರಿಸಿದ್ದು, ನಷ್ಟ ದೂರಾಗಿಸಿ ಲಾಭದಾಯಕ ಹಾದಿಯನ್ನು ಹೇಗೆ ಹಿಡಿಯಬಹುದು ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ...
Published: 27th January 2022 10:31 AM | Last Updated: 27th January 2022 01:57 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳು ಈ ವರ್ಷದ ಮಾರ್ಚ್ ಅಂತ್ಯದವರೆಗೆ ರೂ. 2,130 ನಷ್ಟವನ್ನು ಎದುರಿಸಿದ್ದು, ನಷ್ಟ ದೂರಾಗಿಸಿ ಲಾಭದಾಯಕ ಹಾದಿಯನ್ನು ಹೇಗೆ ಹಿಡಿಯಬಹುದು ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ.
ನಿವೃತ್ತ ಐಎಎಸ್ ಅಧಿಕಾರಿ ಎಂ ಆರ್ ಶ್ರೀನಿವಾಸ್ ಮೂರ್ತಿ ನೇತೃತ್ವದಲ್ಲಿ ಏಕವ್ಯಕ್ತಿ ಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ ಎಂದು ತಿಳಿದುಬಂದಿದೆ.
ಜನವರಿ 31ರವರೆಗೆ ಸಾರ್ವಜನಿಕ ಪ್ರತಿಕ್ರಿಯೆಗಳಿಗೆ ಕರೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಸಾಕಷ್ಟು ಸಭೆಗಳನ್ನು ನಡೆಸಿದ್ದೇನೆ. ಮೂರು ತಿಂಗಳಲ್ಲಿ ಸಮಿತಿಯ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಮಾರ್ಚ್ 28ರೊಳಗಾಗಿ ವರದಿ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಸಾಕಷ್ಟು ಸಲಹೆಗಳು ಬರುತ್ತಿದ್ದು, ಅವುಗಲನ್ನು ಪರಿಗಣಿಸಲಾಗುತ್ತಿದೆ ಎಂದು ಶ್ರೀನಿವಾಸ್ ಮೂರ್ತಿಯವರು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ವೆಚ್ಚ ಕಡಿತಕ್ಕಾಗಿ ಬಿಎಂಟಿಸಿ ಡಿಪೋಗಳಲ್ಲಿ ಸೋಲಾರ್ ಅಳವಡಿಕೆ
ಶ್ರೀನಿವಾಸ ಮೂರ್ತಿ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿರುವ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಮಾತನಾಡಿ, ಸಾರಿಗೆ ಪುನಾರಚನೆ ಮಾಡುವಾಗ ಸಾಂಸ್ಥಿಕ ಶಕ್ತಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಮುಖ್ಯವಾಗುತ್ತದೆ. ಸೇವೆ ಸಲ್ಲಿಸಲು ನಾವಿಲ್ಲಿದ್ದೇವೆ. ಲಾಭಕ್ಕೆ ಹೆಚ್ಚಿನ ಆದ್ಯತೆ ನೀಡುವ ಘಟಕ ನಮ್ಮದಲ್ಲ ಎಂದು ತಿಳಿಸಿದ್ದಾರೆ.
ಈ ನಡುವೆ ಒಕ್ಕೂಟದ ಸದಸ್ಯರು, ಮಾಜಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಕೂಡ ಶ್ರೀನಿವಾಸ್ ಅವರನ್ನು ಭೇಟಿ ಮಾಡುತ್ತಿದ್ದು, ಹಲವಾರು ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಿಕರೊಂದಿಗೂ ಸಭೆ ನಡೆಸಲು ಕೂಡ ಅಧಿಕಾರಿಗಳು ಯೋಜಿಸಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.