ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ
ಸರ್ಕಾರದ ಬೊಕ್ಕಸಕ್ಕೆ ತೆರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Published: 28th January 2022 11:04 AM | Last Updated: 28th January 2022 04:43 PM | A+A A-

ಜನಾರ್ದನ ರೆಡ್ಡಿ
ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, ’ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ ನ್ಯಾಯಾಧೀಶೆ ಪ್ರೀತ್ ಜೆ. ಈ ಆದೇಶ ಹೊರಡಿಸಿದ್ದಾರೆ.
ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದ (63ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಪ್ರೇಟ್) ನ್ಯಾಯಾಧೀಶ ಜೆ.ಪ್ರೀತ್ ಗುರುವಾರ ನಡೆಸಿದರು. ಬಳಿಕ ಈ ಆದೇಶ ಹೊರಡಿಸಿದರು.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಆಪ್ತ ಕಾರ್ಯದರ್ಶಿ ಮೆಹಫೂಜ್ ಅಲಿಖಾನ್ ಹಾಗೂ ಓಬಳಾಪುರಂ ಮೈನಿಂಗ್ ಕಂಪನಿ ಮತ್ತು ಶ್ರೀ ಮಿನರಲ್ಸ್ ಪಾಲುದಾರ ಬಿ.ವಿ. ಶ್ರೀನಿವಾಸ ರೆಡ್ಡಿ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯಿದೆ-1957ರ ಸೆಕ್ಷನ್ 21, 23 ಹಾಗೂ 4(1) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು'' ಎಂದು ಕೋರ್ಟ್ ಸೂಚನೆ ನೀಡಿದೆ.
2015ರಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 379, 409, 420, 468 ಹಾಗೂ 471 ಅಡಿ ದಾಖಲಿಸಿರುವ ಪ್ರಕರಣಕ್ಕೂ (ಕ್ರೈಮ್ ನಂಬರ್ 22/ಧಿ2015) ಪಿಸಿಆರ್‌ಗೂ ಪರಸ್ಪರ ಸಂಬಂಧವಿದೆ ಎಂದಿದ್ದ ತನಿಖಾಧಿಕಾರಿ, ಪ್ರಕರಣದ ಆರೋಪಪಟ್ಟಿಯನ್ನು ಪಿಸಿಆರ್ ಜತೆ ಲಗತ್ತಿಸಿದ್ದರು.
ಆರೋಪಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯದೇ ಸಾವಿರಾರು ಮೆಟ್ರಿಕ್ ಟನ್ ಅದಿರನ್ನು ಮಾರಾಟ ಮಾಡಿದ ಕಾರಣ ಸರ್ಕಾರದ ಬೊಕ್ಕಸಕ್ಕೆ 23 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ’ ಎಂದು ತನಿಖಾಧಿಕಾರಿ ಆರೋಪಿಸಿದ್ದರು. ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿದೆ.