6 ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರ: 'ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಪುಸ್ತಕ ಬಿಡುಗಡೆ ಮಾಡಿದ ಸಿಎಂ
ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ.
Published: 28th January 2022 12:22 PM | Last Updated: 28th January 2022 01:36 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಬಿಡುಗಡೆಗೊಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಿರುಹೊತ್ತಿಗೆ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಅಧಿಕಾರಕ್ಕೆ ಬಂದು 6 ತಿಂಗಳು, ಜನ್ಮದಿನದ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ: ಸಾಧನಾ ಪುಸ್ತಕ ಲೋಕಾರ್ಪಣೆ
Live : ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ "6 ತಿಂಗಳ ಜನಕಲ್ಯಾಣ ಸಮಾರಂಭ - ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು" ಕಾರ್ಯಕ್ರಮ. #NewKarnataka4NewIndia https://t.co/cSc5ObuhwX
— BJP Karnataka (@BJP4Karnataka) January 28, 2022
ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು ಎಂಬ 82 ಪುಟಗಳ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು, ಪುಸ್ತಕದ ಮುಖಪುಟದಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಇರುವುದು ಕಂಡು ಬಂದಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಕೆ.ಎಸ್. ಈಶ್ವರಪ್ಪ, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಉಮೇಶ್ ಕತ್ತಿ, ಗೋಪಾಲಯ್ಯ, ಡಾ. ಸುಧಾಕರ್, ಭೈರತಿ ಬಸವರಾಜ, ವಿ. ಸೋಮಣ್ಣ, ಗೋವಿಂದ ಕಾರಜೋಳ, ಎಸ್. ಅಂಗಾರ, ಬಿ.ಸಿ. ನಾಗೇಶ್, ಎಂಟಿಬಿ ನಾಗರಾಜ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದಾರೆ.