ಅಧಿಕಾರಕ್ಕೆ ಬಂದು 6 ತಿಂಗಳು, ಜನ್ಮದಿನದ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ: ಸಾಧನಾ ಪುಸ್ತಕ ಲೋಕಾರ್ಪಣೆ
ಜನ್ಮದಿನ ಹಾಗೂ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದ ಸಂಭ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಶುಕ್ರವಾರ ಬಿಡುಗಡೆಗೊಳಿಸಲಿದ್ದಾರೆ.
Published: 28th January 2022 07:18 AM | Last Updated: 28th January 2022 11:37 AM | A+A A-

ಸಿಎಂ ಬೊಮ್ಮಾಯಿ (ಸಂಗ್ರಹ ಚಿತ್ರ)
ಬೆಂಗಳೂರು: ಜನ್ಮದಿನ ಹಾಗೂ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದ ಸಂಭ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಶುಕ್ರವಾರ ಬಿಡುಗಡೆಗೊಳಿಸಲಿದ್ದಾರೆ.
ಇನ್ನು ಕೆಲವೇ ತಿಂಗಳುಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, 2023ರ ಅಂತಿಮ ವಿಧಾನಸಭೆ ಚುನಾವಣೆಗೂ ಮುನ್ನ ಬೊಮ್ಮಾಯಿ ಅವರಿಗೆ ಸವಾಲು ಎದುರಾಗಲಿದೆ. ಆದರೆ, ಸಂದರ್ಭಗಳಲ್ಲದೆ, ಅಗತ್ಯ ಬಿದ್ದಾಗ ಸರ್ಕಾರ ಜನಪರ ನಿರ್ಧಾರಗಳನ್ನು ಕೈಗೊಳ್ಳುವುದರಿಂದ ಶುಕ್ರವಾರ ಯಾವುದೇ ಪ್ರಮುಖ ಘೋಷಣೆಗಳನ್ನೂ ಮಾಡುವುದಿಲ್ಲ ಎಂದು ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಸರ್ಕಾರದ ಸಾಧನೆಯನ್ನೊಳಗೊಂಡ ಕಿರುಪುಸ್ತಕವನ್ನು ಬಿಡುಗಡೆ ಮಾಡಲಾಗುವುದು ಮತ್ತು 2023 ರವರೆಗೆ ಎಲ್ಲಾ ಸಚಿವರು ಮತ್ತು ಇಲಾಖೆಗಳು ತಮ್ಮ ಉಪಕ್ರಮಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡುವಂತೆ ಸೂಚನೆ ನೀಡಲಾಗುವುದು. ಇದನ್ನು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ವರ್ಷ ನಡೆಯಲಿರುವ ಬಿಬಿಎಂಪಿ ಚುನಾವಣೆ ಕುರಿತು ಚರ್ಚೆ ನಡೆಸಿದ್ದೇವೆ. ಬಿಬಿಎಂಪಿ ಚುನಾವಣೆಗೆ ಬೆಂಗಳೂರು ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಸಚಿವರೊಂದಿಗೆ ಬೇರೆ ಜಿಲ್ಲೆಗಳ ಸಚಿವರನ್ನು ನಿಯೋಜಿಸುತ್ತಿದ್ದೇವೆ. ಈಗಾಗಲೇ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳ ನಡುವೆ ಅನುದಾನದಲ್ಲಿ ವ್ಯತ್ಯಾಸವಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಮಾತನಾಡಿ, ಅವರು ಆಡಳಿತ ಪಕ್ಷವಾಗಿದ್ದಾಗ ಏನು ಮಾಡಿದ್ದರು ಎಂಬುದನ್ನು ತಿಳಿಯಲು ಹಿಂದೆ ತಿರುಗಿ ನೋಡಬೇಕು ಎಂದಿದ್ದಾರೆ.