ಕೋವಿಡ್ ನಿರ್ಬಂಧ: ಮುಂದಿನ ವಾರ ಸಿಎಂ ಬೊಮ್ಮಾಯಿ ಪರಿಶೀಲನೆ
ತಜ್ಞರ ಸಮಿತಿ ವರದಿ ಬಳಿಕ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕೋವಿಡ್ ನಿರ್ಬಂಧ ಹಾಗೂ ಶಾಲೆಗಳ ಪುನರಾರಂಭ ಕುರಿತು ಮುಂದಿನ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.
Published: 28th January 2022 09:48 AM | Last Updated: 28th January 2022 11:41 AM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ತಜ್ಞರ ಸಮಿತಿ ವರದಿ ಬಳಿಕ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕೋವಿಡ್ ನಿರ್ಬಂಧ ಹಾಗೂ ಶಾಲೆಗಳ ಪುನರಾರಂಭ ಕುರಿತು ಮುಂದಿನ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ಸಚಿವರೊಂದಿಗೆ ಸಾಕಷ್ಟು ವಿಚಾರಗಳ ಕುರಿತು ಮಾತುಕತೆ ನಡೆಸಲಾಯಿತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ, ನಿರ್ವಹಣೆ ಕುರಿತಂತೆಯೂ ಮಾತುಕತೆ ನಡೆಸಲಾಯಿತು. ಸಚಿವರು ಸಾಕಷ್ಟು ಸಲಹೆಗಳನ್ನು ನೀಡಿದರು ಎಂದು ಹೇಳಿದರು.
ಇದನ್ನೂ ಓದಿ: ಕೋವಿಡ್-19: ರಾಜ್ಯದಲ್ಲಿ ನಿನ್ನೆ ದಾಖಲೆಯ 67,000 ಮಂದಿ ಗುಣಮುಖ!
ವಿವಿಧ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು ಸಲ್ಲಿಸಿರುವ ಜ್ಞಾಪನಾ ಪತ್ರಗಳನ್ನು ತಜ್ಞರ ಸಮಿತಿ ಮುಂದೆ ಇಡುವ ಬಗ್ಗೆಯೂ ಚರ್ಚಿಸಿದ್ದೇವೆ. ಸಮಿತಿ ವರದಿ ಸಲ್ಲಿಸಲಿದ್ದು, ಶಿಫಾರಸುಗಳನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಂದಿನ 3-4 ದಿನಗಳಲ್ಲಿ ಅವರ ವರದಿ ಸಿಗುವ ನಿರೀಕ್ಷೆಗಳಿವೆ ಎಂದು ತಿಳಿಸಿದರು.
ರೇಸ್ಕೋರ್ಸ್ನಲ್ಲಿ ನಡೆಯುತ್ತಿರುವ ಡರ್ಬಿಯಲ್ಲಿ ಸಾವಿರಾರು ಜನರು ಸೇರುತ್ತಿರುವ ಕುರಿತು ಕಾಂಗ್ರೆಸ್ ಪ್ರಶ್ನೆಗೆ ಉತ್ತರಿಸಿ, ಒಂದು ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನರು ಸೇರಲು ರಾಜ್ಯ ಸರ್ಕಾರ ಅನುಮತಿ ನೀಡುವುದಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.