ಫುಡ್ ಪಾರ್ಕ್ ಯಶಸ್ವಿಗೊಳಿಸಲು 'ಪರಿಣಾಮ ಮೌಲ್ಯಮಾಪನ'ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
Published: 29th January 2022 03:20 PM | Last Updated: 29th January 2022 04:41 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ ಸಿ ಪಾಟೀಲ್ ಮತ್ತಿತರರು
ಬೆಂಗಳೂರು: ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು ಎಂದರು.
ಆಹಾರ ಕರ್ನಾಟಕ ನಿಯಮಿತ ಫುಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ತಿಳಿಸಿದರು.
ಕೃಷಿ ಸಚಿವ ಬಿ. ಸಿ. ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ @BSBommai ಅಧ್ಯಕ್ಷತೆಯಲ್ಲಿ ಇಂದು ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆ ಜರುಗಿತು.
— CM of Karnataka (@CMofKarnataka) January 29, 2022
ಕೃಷಿ ಸಚಿವ @bcpatilkourava, ಸಂಸದ @shivkumarudasi, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ,
1/2 pic.twitter.com/OMW0dxhGZm