ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಕರ್ನಾಟಕವೂ ಒಂದು!
ಕರ್ನಾಟಕ ಮತ್ತು ದಕ್ಷಿಣದ ಇತರ ಮೂರು ರಾಜ್ಯಗಳು (ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ )ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳಿಗೆ ಕೊಡುಗೆ ನೀಡುವ ದೇಶದ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ.
Published: 29th January 2022 12:30 PM | Last Updated: 29th January 2022 01:48 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕ ಮತ್ತು ದಕ್ಷಿಣದ ಇತರ ಮೂರು ರಾಜ್ಯಗಳು (ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ )ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳಿಗೆ ಕೊಡುಗೆ ನೀಡುವ ದೇಶದ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ.
ಕರ್ನಾಟಕ ಸೇರಿದಂತೆ ಎಂಟು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಕೋವಿಡ್ ನಿರ್ವಹಣಾ ಸ್ಥಿತಿಗತಿ ಕುರಿತು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಪರಿಶೀಲನೆ ನಡೆಸಿದ್ದು, ಈ ವೇಳೆ ಕರ್ನಾಟಕ ಮತ್ತು ದಕ್ಷಿಣದ ಇತರ ಮೂರು ರಾಜ್ಯಗಳಾದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳಿಗೆ ಕೊಡುಗೆ ನೀಡುವ ದೇಶದ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿದ್ದು, ಈ ರಾಜ್ಯಗಳಲ್ಲಿ ಹೋಮ್ ಐಸೋಲೇಷನ್ ನಲ್ಲಿರುವವರ ಮೇಲೆ ಹೆಚ್ಚಿನ ನಿಗಾ, ಕೋವಿಡ್ ಕ್ಲಸ್ಟರ್, ಹಾಟ್ ಸ್ಪಾಟ್ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರು, ಔಷಧಿಗಳ ಲಭ್ಯತೆ, ಸೋಂಕಿಗೆ ಸಂಬಂಧಿಸಿದ ಸಾವುಗಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕಿದೆ ಎಂದು ಸೂಚಿಸಿದರು.
ಇದನ್ನೂ ಓದಿ: 5 ಕೋವಿಡ್ ಕೇರ್ ಕೇಂದ್ರಗಳಲ್ಲಿ 47 ಮಂದಿಗೆ ಚಿಕಿತ್ಸೆ: ಎಲ್ಲರನ್ನೂ ಒಂದೇ ಕೇಂದ್ರಕ್ಕೆ ದಾಖಲಿಸಲು ಬಿಬಿಎಂಪಿ ಚಿಂತನೆ
ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಸುಧಾಕರ್ ಅವರು, ಟೆಲಿ-ಟ್ರೈಜಿಂಗ್ ವಿಧಾನಗಳ ಬಗ್ಗೆ ಕೇಂದ್ರ ಸಚಿವರಿಗೆ ತಿಳಿಸಿದ್ದೇವೆ ಮತ್ತು ಸೋಂಕಿತ ಜನಸಂಖ್ಯೆಯ ಶೇಕಡಾ 95 ಕ್ಕಿಂತ ಹೆಚ್ಚು ಜನರು ಮನೆಗಳಲ್ಲಿ ಐಸೋಲೇಷನ್ ಗೊಳಗಾಗಿದ್ದರೂ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಲಾಗುತ್ತಿದೆ ಎಂದು ತಿಳಿಸಿಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಇಸಂಜೀವನಿಯಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದ ಉತ್ತಮ ಪ್ರಗತಿಗೆ ಮೆಚ್ಚುಗೆ ವ್ಯಕ್ತವಾಗಿದೆ, ಇಸಂಜೀವನಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರಿಗೆ ಟೆಲಿ ಸಮಾಲೋಚನೆ ನಡೆಸಲಾಗಿದ್ದು, ಇದರಿಂದ ಬಹಳಷ್ಟು ಜನರಿಗೆ ಸಹಾಯವಾಗದೆ. ಬೆಡ್ ಆಕ್ಯುಪೆನ್ಸಿ ದರ, ಆಮ್ಲಜನಕದ ಅವಶ್ಯಕತೆಗಳು, ಔಷಧ ಲಭ್ಯತೆ ಮತ್ತು ಸಾವಿನ ಪ್ರಮಾಣಗಳ ಮೇಲೆ ನಿಗಾ ಇಡುವಂತೆ ಮಾಂಡವಿಯಾ ರಾಜ್ಯಕ್ಕೆ ಸೂಚಿಸಿದ್ದಾರೆಂದು ತಿಳಿಸಿದರು.
ಇದನ್ನೂ ಓದಿ: ಬಳ್ಳಾರಿಯಲ್ಲಿ ಕೊರೋನಾ 3ನೇ ಅಲೆ ಅಬ್ಬರ: ಒಂದೇ ದಿನ 5 ಮಂದಿ ಮಹಾಮಾರಿಗೆ ಬಲಿ
ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆಯಾಗಿಲ್ಲ. ಪ್ರತೀನಿತ್ಯ 25 ಸಾವುಗಳು ವರದಿಯಾಗುತ್ತಿವೆ. ಇದರಲ್ಲಿ ಬಹುತೇಕ ಸಾವುಗಳು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರದ್ದಾಗಿದೆ. ಉತ್ತಮ ಅರಿವಿಗಾಗಿ ಡೆಟ್ ಆಡಿಟ್ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.